ತುಮಕೂರು:


ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ, ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಜಿನಮನೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗAಗಾಧರಯ್ಯ ವೇದಿಕೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜನರ ಸಮಸ್ಯೆಗಳಿಗೆ ದ್ವನಿಯಾಗದ ಸಾಹಿತ್ಯ ಬೂಸಾ ಎಂಬ ದಿ.ಬಿ.ಬಸವಲಿಂಗಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಪ್ರೊ.ಎಸ್.ಜಿ.ಸಿದ್ದರಾಮಯ್ಯ,ಸಾಹಿತಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಮಗೆ ದೊರೆತ ಜವಾಬ್ದಾರಿಯಿಂದ ನುಣುಚಿಕೊಂಡAತೆ. ಈ ಬಗ್ಗೆ ಎಲ್ಲಾ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಸಮ್ಮೇಳನದ ಸ್ಮರಣ ಸಂಚಿಕೆ ಕಲ್ಪ ಸೌರಭ ಬಿಡುಗಡೆ ಮಾಡಿ ಮಾತನಾಡಿದ ಸಿಇಓ ಜಿ.ಪ್ರಭು,ವಿಜ್ಞಾನ ತಂತ್ರಜ್ಞಾನಗಳು, ಎಲ್ಲರಿಗೂ ಶಿಕ್ಷಣ ಇಲ್ಲದ ಕಾಲದಲ್ಲಿಯೂ ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಕನ್ನಡಿಗರಿಗೆ ನೆಲೆ ಒದಗಿಸಿದೆ.ಆದರೆ ಎಲ್ಲರಿಗೂ ಜ್ಞಾನ ದೊರೆತ ನಂತರ ಕನ್ನಡವನ್ನು ಉಳಿಸಬೇಕೆಂಬ ಪ್ರಯತ್ನ ನಡೆದಿದೆ.ಎಂದರು.
ತುಮಕೂರು ಜಿಲ್ಲಾ ೧೫ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಹೆಚ್ .ಎಸ್.ಶಿವಪ್ರಕಾಶ್ ಮಾತನಾಡಿ, ಜಾಗತೀಕರಣದ ಫಲವಾಗಿ ಇಡೀ ವಿಶ್ವವೇ ಒಂದು ಮಾರುಕಟ್ಟೆಯಾಗಿ ರೂಪಗೊಂಡು,ಲಾಭವೇ ಮುಖ್ಯವಾಗಿರುವ ಇಂದಿನ ದಿನದಲ್ಲಿ ಪ್ರಾದೇಶಿಕತೆ ಎಂಬುದು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವದ ಅಡಿಯಲ್ಲಿಯೇ ಜಾಗತೀಕರಣ ವಿಸ್ತರಣೆ ಗೊಳ್ಳುತ್ತಿದ್ದು,ಸರ್ವಾಧಿಕಾರಿ ಧೋರಣೆಗಳು,ಬಹುರಾಷ್ಟಿçÃಯ ದಬ್ಬಾಳಿಕೆಯಿಂದ ಅದಿಮ ಸಂಸ್ಕೃತಿ,ಸ್ಥಳೀಯ ಭಾಷೆಗಳಿಗೆ ಕುತ್ತುಂಟಾಗಿದೆ.ಜೀವಪರವಾದ ಸಾಂಸ್ಕೃತಿಕ,ಕಲೆ,ಸAಸ್ಕೃತಿ, ಸಾಹಿತ್ಯಗಳು ನಗಣ್ಯವಾಗುತ್ತಿದೆ ಎಂದರು.
ಸಮ್ಮೇಳನದ ಆಶಯ ನುಡಿಗಳನ್ನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕಸಾಪ ನಿರಂತರ ಚಟವಟಿಕೆಯಲ್ಲಿ ತೊಡಗಿದೆ. ಈ ವರ್ಷ ನಾಲ್ಕು ಸಮ್ಮೇಳನ ನಡೆಸುವ ಗುರಿ ಹೊಂದಿದ್ದು, ಈಗಾಗಲೇ ತುರುವೇಕೆರೆ ಮತ್ತು ಶಿರಾ ಸಮ್ಮೇಳನ ನಡೆದಿವೆ.ಜನವರಿಯಲ್ಲಿ ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕು ಸಮ್ಮೇಳನ ನಡೆಯಲಿವೆ.ಇಂದಿನ ಸಮ್ಮೇಳನದಲ್ಲಿ ೧೫೦೦ ಶಿಕ್ಷಕರು, ೧೦೦೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು,ಗೋಷ್ಠಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಹದಿನಾಲ್ಕನೇ ಸಾಹಿತ್ಯ ಸಮ್ಮೇಳದನ ಅಧ್ಯಕ್ಷ ಎಂ.ವಿ.ನಾಗರಾಜರಾವ್,ನೂತನ ಸಮ್ಮೇಳಾನಾಧ್ಯಕ್ಷರಿಗೆ ಕನ್ನಡ ದ್ವಜ ಹಸ್ತಾಂತರಿಸಿ ದರು. ಸಮ್ಮೇಳನದ ದಿವ್ಯಸಾನಿಧ್ಯ ವಹಿಸಿದ್ದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕ ಜಿ.ಬಿ.ಜೋತಿಗಣೇಶ್ ವಹಿಸಿದ್ದರು .ಸಮ್ಮೇಳನಾಧ್ಯಕ್ಷರ ಮುಗಿಲ ಜಹಜು ಕೃತಿ ಬಿಡುಗಡೆ ಮಾಡಿ ಡಾ.ಎಂ.ಎಸ್.ಅಶಾದೇವಿ ಮಾತನಾಡಿದರು.
ವೇದಿಕೆಯಲ್ಲಿ ಎಡಿಸಿ ಶಿವಾನಂದ ಬಿ.ಕರಾಳೆ,ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮೆರವಣಿಗೆ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್,ಕಸಾಪ ಪದಾಧಿಕಾರಿ ಗಳಾದ ಡಾ.ಡಿ.ಎನ್.ಯೋಗೀಶ್ವರಪ್ಪ,ಉಮಾಮಹೇಶ್,ಡಾ.ಸಣ್ಣಹೊನ್ನಯ್ಯ ಕಂಟಲಗೆರೆ,ಎಸ್.ಯೋಗಾನAದ ಬಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)