ತುಮಕೂರು : ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬAಧಿಸಿದAತೆ 1000 ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯತ್ ರಾಜ್ ಇಲಾಖೆಗಳ ನಿರ್ವಹಣೆ ಮತ್ತು ದುರಸ್ತಿ, ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ, ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆ ಕಾಮಗಾರಿಗಳ ಪರಿಶೀಲನೆ, ಮುಖ್ಯಮಂತ್ರಿಗಳ ವಿಶೇಷ ಅನುದಾನ, ಆರೋಗ್ಯ, ಆಯುಷ್, ಹಿಂದುಳಿದ ವರ್ಗಗಳ ಕಲ್ಯಾಣ, ಕೃಷಿ, ರೇಷ್ಮೆ, ತೋಟಗಾರಿಕಾ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನವಾಗುತ್ತಿವೆ. ಈ ಎಲ್ಲಾ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು. ಕಾಮಗಾರಿಗಳ ಗುಣಮಟ್ಟದ ದೃಢೀಕರಣವನ್ನು ಸಂಬAಧಪಟ್ಟ ಇಲಾಖೆಯವರು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಮೂಲಭೂತ ಸೌಕರ್ಯಗಳಾದ ಶಾಲೆ, ಅಂಗನವಾಡಿ, ಆರೋಗ್ಯ ಕೇಂದ್ರ ಹಾಗೂ ಅನುಷ್ಠಾನ ಇಲಾಖೆಗಳ ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡುವಂತೆ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗಕ್ಕೆ ಸೂಚನೆ ನೀಡಿದರು.
ಸರ್ಕಾರದಿಂದ ಬಿಡುಗಡೆಯಾದ ಅನುದಾನಗಳು ಪೋಲಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಇದರ ಜೊತೆಗೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಸದಾಕಾಲ ನಡೆಯುವಂತೆ ಅಧಿಕಾರಿಗಳು ಗಮನವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಅಧಿಕಾರಿಗಳು, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಅನುಷ್ಠಾನ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

(Visited 1 times, 1 visits today)