ತುಮಕೂರು: ಬಾವಿಯಲ್ಲಿ ಅಪರಿಚಿತ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಎ. ವೆಂಕಟಾಪುರದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಅಪರಿಚಿತ ಹೆಣ್ಣು ಮಗು ಇದಾಗಿದೆ. ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವಿಷಯ ತಿಳಿದ ತಕ್ಷಣ ಕೋಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (Visited 16 times, 1 visits today)