ತುಮಕೂರು:
ತುಮಕೂರು ತಾಲೂಕಿನ 41 ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಕ್ಕೆ ಡಿಸೆಂಬರ್ 22ರಂದು ಚುನಾವಣಾ ಮತದಾನ ನಡೆಯಲಿದ್ದು, 50 ಆಕ್ಸಿಲರಿ ಮತಗಟ್ಟೆ ಸೇರಿ ಒಟ್ಟು 365 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 91 ಸೂಕ್ಷ್ಮ, 77 ಅತಿಸೂಕ್ಷ್ಮ ಹಾಗೂ 197 ಸಾಮಾನ್ಯ ಮತಗಟ್ಟೆಗಳನ್ನಾಗಿ ವಿಂಗಡಿಸಲಾಗಿದೆ.
ತಾಲೂಕಿನ 41 ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ 118109 ಪುರುಷರು, 118011 ಮಹಿಳೆಯರು ಹಾಗೂ 19 ಇತರೆ ಸೇರಿದಂತ ಒಟ್ಟು 236139 ಮತದಾರರಿದ್ದು ಒಟ್ಟು 746 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತ ಎಣಿಕೆಯನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ನಡೆಸಲಾಗುವುದು.
ಕೋವಿಡ್-19 ಮಾರ್ಗಸೂಚಿ, ಚುನಾವಣಾ ಮಾರ್ಗಸೂಚಿಗಳನ್ವಯ ಹಾಗೂ ಮಾದರಿ ನೀತಿ ಸಂಹಿತೆಯಡಿ ಈ ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ನಡೆಸಲಾಗುವುದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಿದ ಬಗ್ಗೆ ಪ್ರತಿದಿನ ಆಯಾ ಗ್ರಾಮ ಪಂಚಾಯಿತಿ ಸೂಚನಾ ಫಲಕದಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ: 0816-2278496ಅನ್ನು ಸಂಪರ್ಕಿಸಬೇಕೆಂದು ತಹಶೀಲ್ದಾರ್ ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.