ಮಧುಗಿರಿ :
ಸರ್ಕಾರದ ಆದೇಶದಂತೆ ಮತ್ತು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆಗಳನ್ನು ರದ್ದು ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಕೋವಿಡ್ -19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಎಲ್ಲಾ ಜಾತ್ರೆ, ಸಭೆ, ಸಮಾರಂಭ ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಯುಗಾದಿ, ಹೋಳಿ, ಗುಡ್ ಫ್ರೈಡೆ ಇನ್ನಿತರ ಹಬ್ಬಗಳಲ್ಲಿ ಸಾರ್ವ ಜನಿಕರು ಸೇರುವುದನ್ನು, ರಾಜಕೀಯ ಕಾರ್ಯಕ್ರಮಗಳನ್ನು, ಗುಂಪು ಸೇರುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಾಮಾಜಿಕ ಅಂತರ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ಸರ್ಕಾರದ ಆದೇಶದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಮಧುಗಿರಿ ಪಟ್ಟಣದಲ್ಲಿ ನಡೆಯುತ್ತಿರುವ ಜಾತ್ರೆಯನ್ನು ರದ್ದು ಮಾಡಿದ್ದು, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ದೇವರ ದರ್ಶನ ಪಡೆಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.