ತುಮಕೂರು :
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲು ನೋಂದಣಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪ್ರತಿ ತಾಲ್ಲೂಕಿನ ಎಪಿಎಂಸಿ ಪ್ರಾಂಗಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿ ಮಾಡಲು ರೈತರ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಉತ್ತಮ ಗುಣಮಟ್ಟದ ಸಾಮಾನ್ಯ ದರ್ಜೆಯ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1940 ರೂ. ಹಾಗೂ ಪ್ರತಿ ಕ್ವಿಂಟಾಲ್ ಗ್ರೇಡ್-ಎ ಭತ್ತಕ್ಕೆ 1960 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಗೊಳಿಸಿದ್ದು, ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟ ಮಾಡಲಿಚ್ಛಿಸುವ ರೈತರು ನೋಂದಣಿ ಕೇಂದ್ರಗಳಿಗೆ ತಮ್ಮ ಈಖUIಖಿ Iಆ ಯೊಂದಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ರೈತರ ನೋಂದಣಿ ಕಾರ್ಯ ಪೂರ್ಣಗೊಂಡ ನಂತರ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಎಂ.ಸಿ. ಶ್ರೀನಿವಾಸಯ್ಯ, ರೈತ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.