ತುಮಕೂರು :
ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಅಧಿಕಾರಿಗಳು ಜಿಲ್ಲಾಡಳಿತದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
ತಮ್ಮ ಕಚೇರಿಯಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನವರಿ 11ರ ವರದಿಯನ್ವಯ ಕೋವಿಡ್ ಸೋಂಕು ಪ್ರಕರಣಗಳ ಪಾಸಿಟಿವಿಟಿ ದರ ಶೇ.13.4ರಷ್ಟಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್ ಹರಡುವಿಕೆಯನ್ನು ತಡೆಯಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಶೇ.100ರಷ್ಟು ಪೂರ್ಣಗೊಳಿಸಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುವ ಮುನ್ನ ಎರಡೂ ಡೋಸ್ ಲಸಿಕೆ ನೀಡುವ ಮೂಲಕ ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸಬೇಕು ಎಂದರಲ್ಲದೆ ಶಾಲೆಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಮಕ್ಕಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಮುಖ್ಯಸ್ಥರಿಗೆ ಸೂಚನೆಗಳನ್ನು ನೀಡಬೇಕು ಎಂದು ನಿರ್ದೇಶಿಸಿದರು.
ಸರ್ಕಾರದ ಆದೇಶದನ್ವಯ ಜನವರಿ 19ರವರೆಗೆ ಜಾರಿಯಲ್ಲಿದ್ದ ರಾತ್ರಿ ಹಾಗೂ ವಾರಾಂತ್ಯದ ಕಫ್ರ್ಯೂ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದ್ದು, ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತ್ರ ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿ ನೀಡಲಾಗುವುದು. ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದಲ್ಲಿ ಕೋವಿಡ್-19 ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲು