ತುಮಕೂರು
ಯಾವುದೇ ಅಡಂಬರವಿಲ್ಲದೆ ಸರಳವಾಗಿ ಜೀವಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಂತ ಶ್ರೇಷ್ಠ ಕನಕದಾಸರು ದಾಸ ಸಾಹಿತ್ಯದ ಅಗ್ರಗಣ್ಯ ಸುಧಾರಕರಾಗಿದ್ದರೆ ಎಂದು ಶಾಸಕ ಜೆ.ಬಿ.ಜ್ಯೋತಿಗಣೇಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ತುಮಕೂರು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರದಲ್ಲಿ ಇಂದು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರ್ರದಲ್ಲಿ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ 535ನೇ ಜಯಂತ್ಯುತ್ಸವ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಮ್ಮ ಸಾಹಿತ್ಯದ ಮೂಲಕ ದಾಸಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಮೆರುಗನ್ನು ಕೀರ್ತನೆಗಳ ಮೂಲಕ ತಂದಿತ್ತ ಸಂತಶ್ರೇಷ್ಠ ಕನಕದಾಸರು, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ವ್ಯೆಚಾರಿಕ ಪರಂಪರೆಗೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದು, ನಂತರ ಅವರಿಗೆ ವೈರಾಗ್ಯ ಉಂಟಾಗಿ ಹರಿದಾಸರಾದರು, ‘ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಾರಿದ ದಾಸವರೇಣ್ಯರು, ಮಾಡಿದರೆ ಮಾಡಬೇಕು ಸತ್ಯವಂತರ ಸಂಗವನು’ ಎಂದು ಹೇಳಿದ್ದಾರೆ. ತಮ್ಮ ಚಿಂತನೆಯ ಮೂಲಕ ಮೇಲು-ಕೀಳು ಮತ್ತು ತಾರತಮ್ಯವನ್ನು ಹೋಗಲಾಡಿಸಲು ಪ್ರಯತ್ನಿಸಿದ ಮಹಾನುಭಾವರು. ತಮ್ಮ ರಚನೆಗಳಲ್ಲಿ ಸಮಾಜದ ಓರೆಕೋರೆಗಳನ್ನು, ಪ್ರಚಲಿತ ಸಮಸ್ಯೆಗಳನ್ನು, ಮೂಢನಂಬಿಕೆಯ ತೊಂದರೆಗಳ ಕುರಿತು ಹೇಳಿ ಅಂದಿನ ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿರುವ ದಾಸರಿವರು, ಸಮಾಜ ಸುಧಾರಕರಾಗಿ, ದಾಸಶ್ರೇಷ್ಠರಾಗಿ ಮೆರೆದ ಸಂತಶ್ರೇಷ್ಠ ಕನಕದಾಸರು ಜೀವನದಲ್ಲಿ ಕಂಡುಕೊಂಡ ಸತ್ಯವನ್ನು ಕೀರ್ತನೆ ಮೂಲಕ ಆಧ್ಯಾತ್ಮಿಕ, ವ್ಯೆಚಾರಿಕ ಸಂದೇಶವನ್ನು ಜನಸಾಮಾನ್ಯನಿಗೆ ಮನಮುಟ್ಟುವಂತೆ ತಿಳಿಸಿ ಕರ್ನಾಟಕ ಸಂಗೀತ ಹಾಗು ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ, ಆಧ್ಯಾತ್ಮದ ಅಂತಿಮ ಗುರಿ ಏನಿದ್ದರೂ ಅದು ಸರ್ವಸಮಾನತೆ ಎಂದು ಕನಕದಾಸರು ಪ್ರತಿಪಾದಿಸಿದರು, ಇಂತಹ ಮಹನೀಯರ ಜಯಂತಿಯನ್ನು ಇಡೀ ರಾಜ್ಯದಲ್ಲಿ ಹಾಗೂ ಹಳ್ಳಿಹಳ್ಳಿಗಳಲ್ಲಿ ಆಚರಣೆ ಮಾಡುತ್ತಿದ್ದಾರೆ. ಇವರು ಕೊಟ್ಟಿರುವ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವ್ಯೆ.ಎಸ್. ಪಾಟೀಲ ಮಾತನಾಡಿ, ಈ ಎಲ್ಲಾ ಬಂಗಾರವನ್ನು ಪ್ರಜೆಗಳ ಹಿತರಕ್ಷಣೆ, ಧಾರ್ಮಿಕ ಕಾರ್ಯಗಳಿಗಾಗಿ ಬಳಸಿ, ಕನಕವನ್ನು ದಾನಮಾಡಿ ‘ಕನಕನಾಯಕ’ ಎಂಬ ಹೆಸರಿಗೆ ಪಾತ್ರನಾಗುತ್ತಾನೆ. ಇಂದು ಇಡೀ ವ್ಯವಸ್ಥೆಯೇ ಗಳಿಕೆಯ ಹಿಂದೆ ಬಿದ್ದಿದ್ದು, ಗಳಿಸುವ ವ್ಯಾಮೋಹ ತುಂಬಾ ಇದೆ. ಬಂದದ್ದನ್ನು ಹಂಚಿಕೊಂಡು ಬದುಕುವ ಪರಿಯನ್ನು ಕನಕದಾಸರು ತಮಗೆ ದೊರೆತ ನಿಧಿಯನ್ನು ಹಂಚುವ ಮೂಲಕ ಸಾಮಾಜಿಕ ಕಳಕಳಿಯನ್ನು ತೋರಿಸಿದರು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಡಾ.ಎಂ.ಸಿ ನರಸಿಂಹಮೂರ್ತಿ ಕಾರ್ಯಕ್ರಮದಲ್ಲಿ ಸಂತ ಶ್ರೇಷ್ಠ ಕನಕದಾಸರ ಬಗ್ಗೆ ಉಪನ್ಯಾಸ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿಧ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ತುಮಕೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಜಿ.ಚಂದ್ರಶೇಖರ್ ಮೊದಲಾದವರು ಸಂತ ಶ್ರೇಷ್ಠ ಕನಕದಾಸ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೌರವ ಸಲ್ಲಿಸಿದರು,
ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ವ್ಯೆ.ಎಸ್. ಪಾಟೀಲ, ಮತ್ತಿತರರು ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದಂತಹ ಸಾಧಕರಿಗೆ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ.ರವಿಕುಮಾರ್ ಸ್ವಾಗತಿಸಿದರು
ಗುರುರೇವಣ್ಣಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಬಿಂದುಶೇಖರ ಒಡೆಯರ್ ಸ್ವಾಮಿ ಹಾಗು ಪ್ರಜಾಪ್ರಗತಿ ದಿನಪತ್ರಿಕ ಸಂಪಾದಕರಾದ ನಾಗಣ್ಣ ಮಾತನಾಡಿದರು.
535ನೇ ದಾಸಶ್ರೇಷ್ಠ ಕನಕ ಜಯಂತೋತ್ಸವ ಅದ್ದೂರಿಯಾಗಿ ನಗರದ ಪ್ರಮುಖ ರಸ್ತೆಗಳಲ್ಲಿ
ಬೆಳ್ಳಿರಥದ ಮೂಲಕ ಸಂತಶ್ರೇಷ್ಠ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದದವು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ.ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಉಪಸ್ಥಿತರಿದ್ದರು.