ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಟಾನಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಹಕಾರ ಅಗತ್ಯ. ತಂಬಾಕಿನಿAದ ತಯಾರಿಸಿದ ಉತ್ಪನ್ನಗಳನ್ನು ಬಳಕೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕಿನ ಚಟದಿಂದ ಹಲವಾರು ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಬರುತ್ತಿವೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಬಾಕು ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮತ್ತಿತರ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ: ರಾಮೇಗೌಡ, ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.