ತುಮಕೂರು: ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ಅಪರಾಧಿ ಬಸವರಾಜ ಎಂಬಾತನಿಗೆ ಜೀವಾವಧಿ, ಕಾರಾಗೃಹ ಶಿಕ್ಷೆ ಮತ್ತು ರೂ. 50 ಸಾವಿರ ದಂಡ ವಿಧಿಸಿ ಮಧುಗಿರಿಯ ಮಾನ್ಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ಅವರು ತೀರ್ಪು ನೀಡಿದ್ದಾರೆ.
2020ರಲ್ಲಿ ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿತ್ತು. ಪ್ರಕರಣ ದಾಖಲಿಸಿ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಪ್ರಭಾಕರ್, ಕೆ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಅಪರಾಧ ಸಾಭೀತಾದ್ದರಿಂದ ಬಸವರಾಜನಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಈ ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ. ನಿರಂಜನಮೂರ್ತಿ, ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.
(Visited 1 times, 1 visits today)