ಹುಳಿಯಾರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆಯಲ್ಲಿ ಹುಳಿಯಾರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಫಲದಾಯಕವಾಗಿವೆ ಎಂಬುದಕ್ಕೆ ಈ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಬಿಜೆಪಿಯವರು ಏನೇ ಕುತಂತ್ರ ಮಾಡಿದರೂ ಮತದಾರ ಅದಕ್ಕೆ ಬೆಲೆ ಕೊಡದೆ ತಕ್ಕ ಪಾಠ ಕಲಿಸಿದ್ದಾನೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದ ಪರಿಣಾಮ ನಮ್ಮ ಮೂವರು ಅಭ್ಯರ್ಥಿಗಳು ಭಾರಿ ಮತಗಳ ಅಂತರದಿAದ ಗೆದ್ದಿದ್ದಾರೆ. ಈ ಗೆಲುವು ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರ ಗೆಲುವಾಗಿದೆ. ವಿರೋಧ ಪಕ್ಷಗಳು ಅಭಿವೃದ್ಧಿಗೆ ಸಹಕರಿಸುವ ಬದಲು ಸುಳ್ಳು ಆರೋಪಗಳನ್ನು ಮಾಡುತ್ತ ಜನಪ್ರಚಾರ ಪಡೆಯಲು ಪ್ರಯತಿಸುತ್ತಿದ್ದಾರೆ. ಆದರೂ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿರುವುದು ಸರ್ಕಾರಕ್ಕೆ ಮತ್ತಷ್ಟು ಆನೆ ಬಲದಂತಾಗಿದೆ ಎಂದರು.
ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕಣ್ಣ ಮಾತನಾಡಿ ಸುಳ್ಳು ಆರೋಪಗಳ ಮೂಲಕ ರಾಜ್ಯದ ಜನರ ಹಾದಿಯನ್ನು ತಪ್ಪಿಸಲು ಪ್ರಯತ್ನಿಸುವ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ಮೈತ್ರಿಗೆ ಮತದಾರ ಸರಿಯಾದ ಉತ್ತರ ನೀಡಿದ್ದಾರೆ ಎಂದರು. ಪಪಂ ಸದಸ್ಯ ಜುಬೇರ್, ಸೈಯದ್ ನೂರ್, ಮುಖಂಡರಾದ ಬಡಗಿರಾಮಣ್ಣ, ನಾಗಣ್ಣ, ಪ್ರಸನ್ನಕುಮಾರ್ ಅನೇಕರಿದ್ದರು.