ಕೊರಟಗೆರೆ: ಸಿಎಂ, ಡಿಸಿಎಂ, ಗೃಹಸಚಿವ, ಸಣ್ಣನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ 15ಕ್ಕೂ ಅಧಿಕ ಸಚಿವರ ವಿರುದ್ದ ಅವಾಚ್ಯ ಶಬ್ದದಿಂದ ನಿಂದನೆ ಮತ್ತು ವೈಯಕ್ತಿಕ ತೇಜೋವದೆಯ ವಿಡೀಯೊ ಮಾಡಿ ಪೇಸ್‌ಬುಕ್, ಇನ್ಸ್ಸ್ಟಾಗ್ರಾಂ ಮತ್ತು ಎಕ್ಸ್ನ ಖಾತೆಗಳಲ್ಲಿ ಹರಿಬಿಟ್ಟು ಉತ್ತರಕಾಂಡ ರಾಜ್ಯದ ಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಭಜರಂಗ ದಳದ ಕಾರ್ಯಕರ್ತನನ್ನು ಕೊರಟಗೆರೆ ಪಿಎಸೈ ಚೇತನಗೌಡ ನೇತೃತ್ವದ ತಂಡ ಇತ್ತೀಚಿಗೆ ಬಂಧಿಸಿರುವ ಘಟನೆ ನಡೆದಿದೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ, ವಸತಿ ಸಚಿವ ಜಮೀರ್‌ಅಹಮ್ಮದ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿ ಹಲವರ ವಿರುದ್ದ ಬಿಜೆಪಿ ಕಾರ್ಯಕರ್ತ 1ರಿಂದ 2ನಿಮಿಷದ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟು ಸರಕಾರದ ಘನತೆಗೆ ದಕ್ಕೆ ತಂದಿರುವ ಬಗ್ಗೆ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ದೂರಿನ ಅನ್ವಯ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು ಜಿಲ್ಲೆಯ ವಿಶ್ವಹಿಂದುಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತನಾಗಿ ಕೆಲಸ ಮಾಡಿರುವ ಮೋಹಿತ್ ನರಸಿಂಹಮೂರ್ತಿ ಪ್ರಸ್ತುತ ಉತ್ತರಕಾಂಡದ ಉಕ್ಕಿಮಠದಲ್ಲಿ ಬಿಜೆಪಿ ಸಂಘಟಕನಾಗಿ ಕೆಲಸ ಮಾಡುತ್ತ ಜೀವನಕ್ಕಾಗಿ ಟೀಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ರಾಜ್ಯಸರಕಾರ ಮತ್ತು ಸಚಿವರ ವಿರುದ್ದ ಮನಸ್ಸಿಗೆ ಬಂದAತೆ ಮಾತನಾಡಿದ್ದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಾಸಭೆಗೆ ಸ್ಪರ್ಧೆ. ದಾಬಸ್‌ಪೇಟೆ ತಾಲೂಕು ನಲ್ಲೂರಿನ ಲೇ.ನರಸಿಂಹಮೂರ್ತಿಯ ಮಗನಾದ ಆರೋಪಿ ಮೋಹಿತ್ ನರಸಿಂಹಮೂರ್ತಿ 2024-25ನೇ ಸಾಲಿನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೊಳಲು ಚಿಹ್ನೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಟೇವಣಿ ಕಳೆದುಕೊಂಡಿದ್ದಾನೆ. ಪ್ರಸ್ತುತವು ಸಹ ಉತ್ತರಕಾಂಡದಲ್ಲಿ ಖಾಸಗಿ ಪಕ್ಷವೊಂದರ ಸಂಘಟಕನಾಗಿ ಗುರ್ತಿಸಿಕೊಂಡು ಪ್ರಚಾರದಲ್ಲಿ ನಿರತನಾಗಿದ್ದ ಎಂದು ತಿಳಿದುಬಂದಿದೆ.
10ಜಿಲ್ಲೆಗಳಲ್ಲಿ 15ಪ್ರಕರಣ ದಾಖಲು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊರಟಗೆರೆ, ಮೈಸೂರು, ಕಲಬುರ್ಗಿ, ಶಿವಮೊಗ್ಗ, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಆರೋಪಿ ಮೊಹಿತ್ ನರಸಿಂಹಮೂರ್ತಿ ಮೇಲೆ ಭಾರತೀಯ ನಾಗರೀಕ ಸುರಕ್ಷಾ ಕಾಯ್ದೆಯಡಿ ಒಟ್ಟು 12ಪ್ರಕರಣ ದಾಖಲಾಗಿವೆ. ಇದಲ್ಲದೇ ಉತ್ತರಕಾಂಡದ ಚಾರದಾಮ ಯಾತ್ರೆ ಮಾಡಿಸುವ ಆಮಿಷವೊಡ್ಡಿ ಕರ್ನಾಟಕದ 10ಜನ ಭಕ್ತರಿಗೆ ಪಂಗನಾಮ ಹಾಕಿರುವ ಹಿನ್ನಲೇ 3ಕಡೆ ಮೋಸದ ಪ್ರಕರಣಗಳು ದಾಖಲಾಗಿವೆ. ಉತ್ತರಕಾಂಡ ರಾಜ್ಯದಲ್ಲಿ ಬಂಧನ: ತುಮಕೂರು ಎಸ್ಪಿ ಅಶೋಕ್‌ವೆಂಕಟ್ ಆದೇಶದ ಮೇಲೆ ತುಮಕೂರು ಸಿಬಿ ಬ್ರಾಂಚ್ ಸಿಪಿಐ ಅವಿನಾಶ್, ಸಿರಾ ಗ್ರಾಮಾಂತರ ಸಿಪಿಐ ರಾಘವೇಂದ್ರ, ಕೊರಟಗೆರೆ ಪಿಎಸೈ ಚೇತನಗೌಡ, ಕ್ರೆöÊಂ ಸಿಬ್ಬಂಧಿಗಳಾದ ದೊಡ್ಡಲಿಂಗಪ್ಪ, ಸಿದ್ದರಾಮ ನೇತೃತ್ವದ 5ಜನ ಪೊಲೀಸರ ತಂಡ 15ಪ್ರಕರಣದ ಆರೋಪಿ ಮೋಹಿತ್ ನರಸಿಂಹಮೂರ್ತಿಯನ್ನು ಉತ್ತರಕಾಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆ ಚಮೋಲಿ ತಾಲೂಕಿನ ಉಕ್ಕಿಮಠದ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ತುಮಕೂರು ಎಸ್ಪಿ ಅಶೋಕ್‌ವೆಂಕಟ್, ಎಎಸ್ಪಿ ಮರೀಯಪ್ಪ, ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಕೊರಟಗೆರೆಗೆ ಬೇಟಿನೀಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ. ಕೊರಟಗೆರೆ ಸಿಪಿಐ ಅನಿಲ್, ಪಿಎಸೈ ಚೇತನಗೌಡ ನೇತೃತ್ವದ ತಂಡ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಅರಕೆರೆಶಂಕರ್ ಬ್ಲಾಕ್‌ಕಾಂಗ್ರೇಸ್ ಅಧ್ಯಕ್ಷ. ಕೊರಟಗೆರೆ, ತಿಳಿಸಿದರು.
ಸಿಎಂ, ಡಿಸಿಎಂ, ಗೃಹಸಚಿವರು ಸೇರಿ 15ಕ್ಕೂ ಅಧಿಕ ಸಚಿವರ ಬಗ್ಗೆ ಮೊಹೀತ್ ನರಸಿಂಹಮುರ್ತಿ ಎಂಬಾತ ವೈಯಕ್ತಿಕ ತೇಜೋವದೆಯ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಉತ್ತರಕಾಂಡಕ್ಕೆ ಪರಾರಿ ಆಗಿದ್ದಾನೆ. ಸರಕಾರದ ಘನತೆಗೆ ದಕ್ಕೆ ಮತ್ತು ಅವಾಚ್ಯ ಶಬ್ದ ಬಳಕೆ ಮಾಡಿದ್ದ ತಪ್ಪು. ನಾನು ದೂರು ನೀಡಿದ ತಕ್ಷಣವೇ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.