ತುಮಕೂರು: ದೆಹಲಿ ವಿಧಾನಸಭಾಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆರಾಜ್ಯ ಸಚಿವ ವಿ.ಸೋಮಣ್ಣಅವರ ನೇತೃತ್ವದಲ್ಲಿ ಶನಿವಾರ ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಪಟಾಕಿ ಹಚ್ಚಿ, ಸಿಹಿ ಹಂಚಿಸAಭ್ರಮಿಸಿದರು.
ಈ ವೇಳೆ ಮಾತನಾಡಿದ ಸಚಿವ ವಿ.ಸೋಮಣ್ಣ, ದೆಹಲಿ ಚುನಾವಣಾ ಪ್ರಚಾರದಲ್ಲಿತಾವೂ ಪಾಲ್ಗೊಂಡಿದ್ದುಎಲ್ಲೆಡೆ ಬಿಜೆಪಿ ಪರವಾಗಿಜನ ಒಲವುಕಂಡುಬAದಿತ್ತು, ಎಲ್ಲಾಧರ್ಮಿಯರೂ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದ್ದಾರೆ.ಪ್ರತಿಪಕ್ಷಗಳ ಆಮಿಷಗಳಿಗೆ ಬೆಲೆ ಕೊಡದೆದೆಹಲಿ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆಎAದು ಸಂತಸ ವ್ಯಕ್ತಪಡಿಸಿದರು.
ರಾಷ್ಟçದರಾಜಧಾನಿ ದೆಹಲಿಯ ವಿಧಾನಸಭಾಚುನಾವಣೆದೇಶದ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ದೇಶದರಕ್ಷಣೆ, ಅಭಿವೃದ್ಧಿಗೆ ಬಿಜೆಪಿಯೇ ಪರಿಹಾರಎಂದುದೇಶದಜನರು ಪಕ್ಷದ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಪಕ್ಷ ಹಾಗೂ ನಮ್ಮ ನಾಯಕರುಜನರ ನಂಬಿಕೆ, ವಿಶ್ವಾಸಕ್ಕೆಧಕ್ಕೆಯಾಗದಂತೆದೇಶದ ಸುರಕ್ಷತೆ, ಪ್ರಗತಿಗೆ ಶ್ರಮಿಸುತ್ತಾರೆಎಂದು ಹೇಳಿದರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾಯುವ ಮೋರ್ಚಾಅಧ್ಯಕ್ಷಚೇತನ್, ನಗರಅಧ್ಯಕ್ಷಧನುಷ್, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಹನುಮಂತರಾಯಪ್ಪ, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್ ಮೊದಲಾದವರು ಭಾಗವಹಿಸಿದ್ದರು.
(Visited 1 times, 1 visits today)