ತುಮಕೂರು:
ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಶಾಲೆಗಳಿಗೆ ನೀರು ಸರಬರಾಜಿಗೆ ಸಂಬಂಧಿಸಿದಂತೆ ಸಭೆಗೆ ಅಗತ್ಯ ಮಾಹಿತಿ ನೀಡಬೇಕಾಗಿದ್ದ ಇಂಜಿನಿಯರ್ ಗೈರು ಹಾಜರಾಗಿದ್ದರಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಡಾ|| ಜಿ.ಸಿ ನವ್ಯಬಾಬು ಸೂಚನೆ ನೀಡಿದರು.
ಜಿಲ್ಲಾ ಪೊಂಚಾಯತಿಯಲ್ಲಿಂದು ಜರುಗಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ 3ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆರೋಗ್ಯ ಇಲಾಖೆಯಲ್ಲಿರುವ ವೈದ್ಯರ ಕೊರತೆ, ಪ್ರಾಥಮಿಕ ಆರೋಗ್ಯ ಕೇಂದ್ರ/ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ, ಸಿಸಿ ಕ್ಯಾಮೆರಾ ಅಳವಡಿಕೆಯ ಬಗ್ಗೆ ಕ್ರಮ ಕೈಗೊಳ್ಳಲು ಈಗಾಗಲೇ ಸಮಿತಿ ರಚಿಸಲಾಗಿದೆ. ಆರೋಗ್ಯ ಇಲಾಖಾ ಕಟ್ಟಗಳ ದುರಸ್ಥಿ ಕಾಮಗಾರಿ ಹಾಗೂ ಔಷಧಿಗಳ ದಾಸ್ತಾನು ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶೂ-ಸಾಕ್ಸ್ ಸರಬರಾಜು, ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚಿಸಿದರಲ್ಲದೆ ಅಕ್ಷರ ದಾಸೋಹದ ಕಾರ್ಯಕ್ರಮದಡಿ ಯಾವುದೇ ದೂರುಗಳು ಬರದಂತೆ ಎಚ್ಚರವಹಿಬೇಕೆಂದು ನಿರ್ದೇಶನ ನೀಡಿದರು.
ಈ ಸಭೆಯಲ್ಲಿ ಸ್ಥಾಯಿ ಸಮಿತಿಯ ಸದಸ್ಯರಾದ ಎಂ.ಎಸ್ ಗಾಯಿತ್ರಿದೇವಿ, ಚನ್ನಮಲ್ಲಪ್ಪ, ಜಿ.ಹೆಚ್. ಜಗನ್ನಾಥ್, ಕೆಂಪಚೌಡಪ್ಪ, ಯೋಜನಾ ನಿರ್ದೇಶಕ ವೈ.ಮಹಾಕಾಂಳಪ್ಪ, ಮತ್ತಿತರ ಅಧಿಕಾರಿಗಳು ಹಾಜರಿದ್ದರು.