ತುಮಕೂರು:
ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ತುಮಕೂರು ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ಗೋಶಾಲೆ ತೆರೆಯಲಾಗಿದೆ.
ಮಧುಗಿರಿ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಹಿಪ್ಪೆ ತೋಪು,: ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿಯ ಬಾಗವಾಳದ ಮುನಿಯಪ್ಪನ ಆಲದಮರ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣ: ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಗಂಡಿಹಳ್ಳಿ ಮಠ: ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಚಿಕ್ಕತೊಟ್ಲುಕೆರೆ ಅಟವಿಸ್ವಾಮಿ ಮಠ: ಪಾವಗಡ ತಾಲ್ಲೂಕು ನಿಡಗಲ್ ಹೋಬಳಿಯ ವದನಕಲ್ಲು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣ: ತುರುವೇಕೆರೆ ತಾಲ್ಲೂಕು ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿ ರಂಗನಾಥಸ್ವಾಮಿ ದೇವಸ್ಥಾನದ ಆವರಣ: ಚಿಕ್ಕನಾಯನಕಹಳ್ಳಿ ತಾಲ್ಲೂಕು ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಶ್ರೀಗುರು ಸಿದ್ದರಾಮೇಶ್ವರ ದೇವಸ್ಥಾನದ ಹಿಂಭಾಗ: ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿಯ ಬೆಟ್ಟದಳ್ಳಿ ಮಠದ ಆವರಣದಲ್ಲಿ ಗೋಶಾಲೆಗಳನ್ನು ಆರಂಭಿಸಲಾಗಿದೆ.
ಮೇವಿನ ಕೊರತೆಯಿರುವ ಜಿಲ್ಲೆಯ ರೈತಬಾಂಧವರು ತಮ್ಮ ಜಾನುವಾರುಗಳನ್ನು ಗೋಶಾಲೆಗೆ ದಾಖಲಿಸಿ ಉಚಿತವಾಗಿ ಮೇವು ಪಡೆಯುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದು. ಗೋಶಾಲೆಗಳಲ್ಲಿ ಪ್ರತಿದಿನ ಪ್ರತಿ ಜಾನುವಾರಿಗೆ 6 ಕೆಜಿ ಒಣಮೇವು/18 ಕೆಜಿ ಹಸಿರುಮೇವು, ನೀರಿನ ಸೌಲಭ್ಯ ಹಾಗೂ ಪಶುವೈದ್ಯಕೀಯ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.