ತುಮಕೂರು :
ಜಿಲ್ಲೆಯ ಕುಣಿಗಲ್ ತಾಲೂಕಿನ ಗಿರಿ ಗೌಡನ ಪಾಳ್ಯದ ಅರವಿಂದ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಧ್ರುವ ಕುಮಾರ್ (16)ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸೋಮವಾರ ರಾತ್ರಿ ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಸಹಪಾಠಿಗಳು ಆತನ ರಕ್ಷಿಸಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ ಕೂಡಲೇ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ವಿವಿಧ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ.
ಪೋಷಕರಿಗೆ ಮಾಹಿತಿ ನೀಡಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೊದಲನೇ ಪಿಯುಸಿಯ. ವ್ಯಾಸಂಗ ಮಾಡುತ್ತಿದ್ಗ. ಬೆಂಗಳೂರಿನ ಮತ್ತಿಕೆರೆ ವಾಸಿ ನಾಗರಾಜ್ ರವರ ಮಗನಾಗಿದ್ದು, ಇವರು ಖಾಸಗಿ ಶಿಕ್ಷಕರಾಗಿ ಟ್ಯುಷನ್ ಮಾಡುತ್ತಿದ್ದರು.
ಘಟನೆಗೆ ಸಂಬಂಧಿಸಿದಂತೆ ಪೋಷಕರು ಕುಣಿಗಲ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಹೊರ ಬರದ ಕಾರಣ ಹಲವು ವದಂತಿಗಳು ಸಹ ಹುಟ್ಟಿಕೊಂಡಿದೆ.