ತುಮಕೂರು : 

     ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರ ವ್ಯಾಪ್ತಿಯಲ್ಲಿ 10 ಹಾಗೂ ಗ್ರಾಮಾಂತರದಲ್ಲಿ 6 ಸೇರಿ ತುಮಕೂರು ತಾಲ್ಲೂಕಿನಲ್ಲಿ 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಹಶೀಲ್ದಾರ್ ಮೋಹನ್‍ಕುಮಾರ್ ತಿಳಿಸಿದರು.  

      ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಆಯೋಗದ ನಿರ್ದೇಶನದ ಮೇರೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಯೇ ನಡೆಸಲಾಗುತ್ತಿದೆ ಎಂದರು.

       ತುಮಕೂರು ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ ಮಸ್ಟರಿಂಗ್ ಮತ್ತು ಡಿಮಸ್ಟರಿಗೆ ಕೌಂಟರ್‍ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. .
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸಲಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಿ.ಪಿ.ಇ. ಕಿಟ್, ಮಾಸ್ಕ್, ಸ್ಯಾನಿಟೈಸರ್ ಎಲ್ಲವನ್ನು ಚುನಾವಣಾ ಆಯೋಗದಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

(Visited 8 times, 1 visits today)