ತುಮಕೂರು:
ಶ್ರಮಿಕ ವರ್ಗವಾಗಿರುವ ತಿಗಳ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ “ತಿಗಳ ಅಭಿವೃದ್ಧಿ ನಿಗಮ” ಸ್ಥಾಪಿಸಿ, ಕನಿಷ್ಠ 100 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಬೇಕು ಎಂದು ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ತಿಗಳ ಜನಾಂಗವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮೇಲೆತ್ತಲು ಹಾಲಿ ಇರುವ ಪ್ರವರ್ಗ-2ಎ ಯಿಂದ ಪ್ರವರ್ಗ-1ಕ್ಕೆ ಬದಲಾಯಿಸಬೇಕು ಎಂದು ಸಮಾಜದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಮುದಾಯದ ಪ್ರಗತಿಗಾಗಿ 80 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಸಮುದಾಯದ ಪ್ರಗತಿಗಾಗಿ ಯಾವುದೇ ಅನುದಾನ ನೀಡಲಿಲ್ಲ ಎಂದು ದೂರಿದರು.
ಮಡಿವಾಳ, ಕುಂಬಾರ, ಸವಿತಾ ಸಮಾಜ, ತಿಗಳ ಸಮುದಾಯದ ಅಭಿವೃದ್ಧಿಗೆ 2018ರಲ್ಲಿ 60 ಕೋಟಿ ಪ್ಯಾಕೇಜ್ ನೀಡಲಾಗಿತ್ತು. ಸಾಮಾಜಿಕ, ಆರ್ಥಿಕ, ಸಾಮಾಜಿಕ ಗಣತಿ ಪ್ರಕಟಿಸಿದರೆ ಯೋಜನಾ ಬದ್ಧವಾಗಿ ಅಭಿವೃದ್ಧಿಗೆ ಶ್ರಮಿಸಬಹುದು. ಆದರೆ ಸರ್ಕಾರ ಅದನ್ನು ಸಹ ಪ್ರಕಟಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಸಮುದಾಯಗಳ ಸ್ಥಿತಿಗತಿಯನ್ನು ಅಧ್ಯ ಯನ ಮಾಡಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 152 ಕೋಟಿ ರೂ. ವೆಚ್ಚ ಮಾಡಿದೆ. ತಿಗಳ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕು, ನಿಗಮ ಮಂಡಳಿ ಸ್ಥಾಪಿಸಬೇಕು ಹಾಗೂ ಸಮುದಾಯದ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಆಗ್ರಹಿಸಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿರುವುದು ಸಂವಿಧಾನ ಬಾಹಿರವಾಗಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇಲ್ಲದ ಸಮುದಾಯಕ್ಕೆ ನಿಗಮ ರಚಿಸಿರುವುದಕ್ಕೆ ಸಂವಿಧಾನದ ಮಾನ್ಯತೆ ಇಲ್ಲ., ಜನರ ಕಣ್ಣೊರೆಸಲು ಈ ರೀತಿ ಮೋಸವನ್ನು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ತಿಗಳ ಮಹಾಸಭಾ ಅಧ್ಯಕ್ಷ ಹೆಚ್. ಸುಬ್ಬಣ್ಣ ಮಾತನಾಡಿ, ತಿಗಳ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡಲಿ, ಹಿಂದುಳಿದ ವರ್ಗಗಳ ಪುಟ 2 ಕ್ಕೆ