ಹುಳಿಯಾರು:

      ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುತ್ತಿರುವ ನಿಷ್ಟಾವಂತ ಕಾರ್ಯಕರ್ತರನ್ನು ಗೆಲ್ಲಿಸಲು ಹಗಲಿರುಳೆನ್ನದೆ ದುಡಿಯುವಂತೆ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಕರೆ ನೀಡಿದರು. 

     ಗ್ರಾಮ ಪಂಚಾಯ್ತಿ ಚುನಾವಣೆಯ ಹಿನ್ನೆಲೆಯಲ್ಲಿ ಹಂದನಕೆರೆ ಹೋಬಳಿ ಬರಗುರು ಪಂಚಾಯ್ತಿಯ ಉಪ್ಪಾರಹಳ್ಳಿಯಲ್ಲಿ ನಡೆದ ಜೆಡಿಎಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

      ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ನಾವು ಗೆಲ್ಲುವುದು ಎಷ್ಟು ಮುಖ್ಯವೋ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವುದು ಅಷ್ಟೇ ಮುಖ್ಯ. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‍ನಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಹಾಕಬೇಕು.

     ಸಾಮಜಿಕ ಸ್ಥಾಯಿ ಸಮಿತಿ ಅಧ್ಯಕ್ಷರು ರಾಮಚಂದ್ರಯ್ಯ, ಯಶಸ್, ಮುನಿಯಪ್ಪ, ಹನುಮಂತಯ್ಯ, ರಾಮಚಂದ್ರಯ್ಯ, ಬಸವರಾಜು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(Visited 8 times, 1 visits today)