ಚಿಕ್ಕನಾಯಕನಹಳ್ಳಿ :  

      ಡಿ.27 ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಮತಗಟ್ಟೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಲಾಯಿತು.

      ಪಟ್ಟಣದ ತೀನಂಶ್ರಿ ಸ್ಮಾರಕ ಭವನ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕಿನ 27 ಗ್ರಾಮ ಪಂಚಾಯಿತಿಗಳ ಚುನಾವಣಾ ಸಿಬ್ಬಂದಿಗಳಾದ 278 ಮತಗಟ್ಟೆ ಅಧಿಕಾರಿಗಳು ಹಾಗೂ 278 ಮಂದಿ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಹಾಗೂ ಎಲ್‍ಇಡಿ ಮೂಲಕ ತರಬೇತಿ ನೀಡಲಾಯಿತು.

     ಈ ತರಬೇತಿ ಕೆಂದ್ರಗಳಿಗೆ ಜಿಲ್ಲಾಧಿಕಾರಿ ಕೆ. ರಾಕೇಶ್‍ಕುಮಾರ್ ಹಾಗೂ ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ ಭೇಟಿ ನೀಡಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ನಂತರ ಸ್ಟ್ರಾಂಗ್ ರೂಂಗೆ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್ ಬಿ. ತೇಜಸ್ವಿನಿ, ಸಿಪಿಐ ವೀಣಾ ಮತ್ತು ಸಿಬ್ಬಂದಿಗಳು ಹಾಜರಿದ್ದರು.
 

(Visited 8 times, 1 visits today)