ತುಮಕೂರು : 

      ಗ್ರಾಮಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕಾ ದಿನದಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

      ಈ ನಿಷೇಧಾಜ್ಞೆಯನ್ವಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಿಸಿ, ಮದ್ಯ ಮಾರಾಟ/ಶೇಖರಣೆಯನ್ನು ನಿಷೇಧಿಸಿ ಒಣದಿನವೆಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

(Visited 7 times, 1 visits today)