ತುಮಕೂರು : 

      ದಿನನಿತ್ಯ ನ್ಯಾಯಾಲಯ ಕಚೇರಿ, ಕಲಾಪದಲ್ಲಿಯೇ ಕಾಲ ಕಳೆಯುತ್ತಿದ್ದ ನ್ಯಾಯಾಧೀಶರು, ವಕೀಲರುಗಳು ಇಂದು ನ್ಯಾಯಾಲಯದ ಆವರಣವನ್ನು ಸ್ವಚ್ಛಗೊಳಿಸಿದರು.

       ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ(ರಿ)ಗಳ ಸಹಯೋಗದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರು ನ್ಯಾಯಾಲಯ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಅರಿವು ಮೂಡಿಸಿದರು.

         ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೆಂದ್ರ ಶೆಟ್ಟಿಗಾರ್ ಅವರು ಮಾತನಾಡಿ, ಹುತ್ಮಾತರ ದಿನಾಚರಣೆ ಅಂಗವಾಗಿ “ನಮ್ಮ ನ್ಯಾಯಾಲಯ-ಸ್ವಚ್ಛ ನ್ಯಾಯಾಲಯ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ತಾನು ವಾಸಿಸುವ ಮನೆ, ಕೆಲಸ ಮಾಡುವ ಸ್ಥಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಸ್ವಚ್ಛತೆ ಕಾಪಾಡಿದರೆ ಪ್ರತಿಯೊಬ್ಬರ ಆರೋಗ್ಯ ಚೆನ್ನಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

      ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜೆ.ಕೆ.ಅನಿಲ್ ಸೇರಿದಂತೆ ಅಧಿಕ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ವಕೀಲರು ಭಾಗವಹಿಸಿದ್ದರು.

 

(Visited 13 times, 1 visits today)