ತುಮಕೂರು:

      ತುಮಕೂರಿನ ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಕೀಲು ಮತ್ತು ಮೂಳೆ ವಿಭಾಗ ವೈದ್ಯರು 60 ವರ್ಷದ ವ್ಯಕ್ತಿಗೆ ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸ್ವಾವಲಂಬಿಯಾಗಿ ನಡೆದಾಡುವಂತೆ ಮಾಡಿ ದ್ದಾರೆ.

      ಕೊರಟಗೆರೆ ತಾಲ್ಲೂಕಿನ ಸಿಂಗಲಿಕಾಪುರ ಗ್ರಾಮದ ಅರಸಪ್ಪ (60) ವರ್ಷ ಎಂಬುವವರು ಸೊಂಟದ ಕಾಲುನೋವಿನಿಂದ ಬಳಲುತ್ತಿದ್ದರು. ಇವರ ಜೀವನ ತುಂಬ ದುಸ್ತರವಾಗಿತ್ತು. ದಿನನಿತ್ಯದ ಕೆಲಸಗಳಿಗೆ ಬೇರೆಯವರ ಸಹಾಯಯಾಚಿಸುವಂತಾಗಿತ್ತು. ಇವರಿಗೆ (ಊiಠಿ ಖeಠಿಟಚಿಛಿemeಟಿಣ) ಆಪರೇಷನ್ ಅಗತ್ಯವಾಗಿತ್ತು. ಇತರರ ಸಹಾಯದಿಂದ ನಡೆದಾಡುತ್ತಿದ್ದರು ಅಪರೇಷನ್ ಮಾಡಿದ ನಂತರ ತಾವೇ ನಡೆದಾಡುವಂತಾಗಿದ್ದಾರೆ.

      ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯರುಗಳು ಸಕಲ ಪರೀಕ್ಷೆ ಮಾಡಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದರು. ರೋಗಿಯೂ ಸಾಮಾನ್ಯ ಶಸ್ತ್ರಚಿಕಿತ್ಸೆಗೆ ಗುಣವಾಗುವುದು ಕಷ್ಟವಾಗಿರುವುದರಿಂದ ಸೊಂಟದ ಕೀಲು ಮಂಡಿ ಮರುಜೋಡಣೆ ಶಸ್ತ್ರಚಿಕಿತ್ಸೆ ಮಾಡಿ ಅತಿ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ತಾವೇ ನಡೆದಾಡುವಂತಾಗಿದ್ದಾರೆ. ಇವರು ಸುಮಾರು 10 ವರ್ಷಗಳ ಕಾಲ ನೋವಿನಿಂದ ಬಳಲುತ್ತಿದ್ದರು, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಎ.ಬಿ.ಎ.ಆರ್.ಕೆ. ಮತ್ತು ಇ.ಎಸ್.ಐ.ಅಡಿಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಿ ಸ್ವಾವಲಂಬಿಯಾಗಿ ನಡೆದಾಡುವಂತಾಗಿದ್ದಾರೆ ಎಂದು ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯ ಡಾ.ಕೆ.ಆರ್.ರಾಧೇಶ್‍ರವರು ತಿಳಿಸಿದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೋಗಿದರೆ, ರೂ. ಲಕ್ಷಾಂತರ ಖರ್ಚು ಆಗುತ್ತಿತ್ತು, ಆದರೆ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ಬಂದಿರುವುದರಿಂದ ಅತಿ ಕಡಿಮೆ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆಯಾಗಿದೆ. ಶ್ರೀದೇವಿ ಮೆಡಿಕಲ್ ಕಾಲೇಜಿನ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕ್ಲಿಷ್ಟಕರವಾದದನ್ನು ಸಾಧಿಸಿದ್ದಾರೆ. ತುಮಕೂರಿನ ಶಿರಾರಸ್ತೆಯಲ್ಲಿರುವ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಧುನಿಕ ಸೌಲಭ್ಯಗಳಿದ್ದು, ಸಾರ್ವಜನಿಕರು ಉಪಯೋಗ ಮಾಡಿಕೊಳ್ಳಬೇಕು. ಅತ್ಯಂತ ಕಡಿಮೆ ವೆಚ್ಚದಲ್ಲಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ವೈದ್ಯರು ತಿಳಿಸಿದರು.

      ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥರಾದ ಡಾ.ಶಶಿಕುಮಾರ್, ಡಾ. ಕೆ.ಆರ್.ರಾಧೇಶ್, ಡಾ. ಅಕ್ಬರ್ ಇಕ್ರಂ ಅಹಮ್ಮದ್, ಡಾ.ಅಬ್ದುಲ್ ಖಾದರ್, ಡಾ.ಮಂಜುನಾಥ್, ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇರಿದಂತೆ ಅನುಭವಿ ವೈದ್ಯರ ತಂಡ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್ ಮತ್ತು ಶ್ರೀದೇವಿ ವೈದ್ಯಕೀಯ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಾಲರಾಜು, ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರನ್ನು ಅಭಿನಂದಿಸಿದ್ದರು.
ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇರಿದಂತೆ ಅನುಭವಿ ವೈದ್ಯರ ತಂಡ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗಾಗಿ 0816-2211999, 2211888 ರವರನ್ನು ಸಂಪರ್ಕಿಸಲು ಕೋರಲಾಗಿದೆ.

(Visited 47 times, 1 visits today)