ತುಮಕೂರು :
ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಅಧ್ಯಕ್ಷ ಹೆಚ್.ಸಿ ಹನುಮಂತಯ್ಯ ತಿಳಿಸಿದರು.
ನಗರದ ಶಿರಾಗೇಟ್ ರಸ್ತೆಯಲ್ಲಿರುವ ಕಾಳಿದಾಸ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ತುಮಕೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದೈಹಿಕ ಶಿಕ್ಷಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜ ಮತ್ತು ಕೊರೋನಾ ಜಾಗೃತಿ ಮಾಹಿತಿ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿ, ದೇಶಪ್ರೇಮದ ಸಂಕೇತವಾಗಿರುವ ನಮ್ಮ ತ್ರಿವರ್ಣ ಧ್ವಜ ಹಲವು ವಿಶೇಷತೆಗಳಿಂದ ಕೂಡಿದ್ದು, ಹಲವು ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ನಾಯಕರು ಸೇರಿ ನಮ್ಮ ರಾಷ್ಟ್ರಧ್ವಜಕ್ಕೆ ಸುಂದರ ರೂಪ ನೀಡಿದ್ದಾರೆ ಎಂದರು.
ಕೇಸರಿ ಬಣ್ಣ ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆದ ಬಲಿದಾನಗಳ ಸಂಕೇತವಾಗಿದೆ. ಬಿಳಿಬಣ್ಣ ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ. ಹಸಿರು ಬಣ್ಣ ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧ ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ ಎಂದು ವಿವರಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಉಪಸ್ಥಿತರಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಡೀ ದಿನ ಕೂಲಂಕುಷವಾಗಿ ವಿವರಿಸಲಿದ್ದಾರೆ ಎಂದು ಹೆಚ್.ಸಿ.ಹನುಮಂತಯ್ಯ ತಿಳಿಸಿದರು. ಕೊರೋನ ಬಗ್ಗೆ ತಪ್ಪು ಕಲ್ಪನೆ ಬೇಡ, ಅನಗ ತ್ಯವಾಗಿ ಭಯ ಪಡುವ ಅಗತ್ಯವಿಲ್ಲ. ಜನರಿಗೆ ಭಯ ಹುಟ್ಟಿಸುವ ಬದಲು, ಧೈರ್ಯ ತುಂಬುವ ಕೆಲಸವಾಗಬೇಕು, ಪ್ರಸ್ತುತ ದಿನಗಳಲ್ಲಿ ಕೊರೊನಾಗೆ ಜನರು ಅನಗತ್ಯ ಭಯ ಪಡುವ ಸ್ಥಿತಿ ಇದೆ, ಆದರೆ ಭಯ ಪಡುವ ಬದಲು ಸುರಕ್ಷತೆಗೆ ಆದ್ಯತೆ ನೀಡಿದರೆ, ಅದು ನಮಗೆ ಬಾಧಿಸುವ ಸಾಧ್ಯತೆ ತೀರಾ ಕಡಿಮೆ. ಮುಖ್ಯವಾಗಿ ಸರ್ಕಾರದ ನಿರ್ದೇಶನಗಳನ್ನು ಸರಿಯಾಗಿ ಪಾಲಿಸೋಣ. ಎಲ್ಲರೂ ಧನಾತ್ಮಕವಾಗಿ ಯೋಚಿಸಿ, ಮಾನಸಿಕವಾಗಿ ಸಧೃಢರಾಗಬೇಕು ಎಂದರು.
ಸಂಯೋಜಕ ಡಾ.ನಾಗರಾಜ ಪಾಟೀಲ್ ಕೊರೋನ ಕುರಿತು ಉಪನ್ಯಾಸ ನೀಡಿ, ಕೊರೋನ ಮಹಾಮಾರಿಯಲ್ಲ, ಸಾಮಾನ್ಯ ಸೋಂಕು, ಎಚ್1ಎನ್1 ತರಹ ಮತ್ತೊಂದು ಸೋಂಕು. ಸ್ವಚ್ಚತೆಯ ಶುದ್ಧ ನೀರು, ಆಹಾರ, ಗಾಳಿ ಜೊತೆಗೆ ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳಬೇಕು ಎಂದು ವಿವರಿಸಿದರು. 2ನೇ ಪುಟಕ್ಕೆ