ತುಮಕೂರು:

       ಕೋವಿಡ್-19ರ 2ನೇ ಅಲೆಯ ಸೋಂಕು ಹೆಚ್ಚಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಗಳ ಪಾಲನೆ ಕುರಿತು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ನಗರದ ಮಾಲ್‍ಗಳು, ಚಿತ್ರಮಂದಿರ, ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಗರದ ಎಂ.ಜಿ.ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ, ಎಸ್ಪಿ ಇಂದು ಬಿ.ಹೆಚ್.ರಸ್ತೆಯಲ್ಲಿರುವ ಅಂಗಡಿ ಮಳಿಗೆಗಳು, ಮಾಲ್‍ಗಳು, ಗಾಯತ್ರಿ ಚಿತ್ರಮಂದಿರ, ಹೋಟಲ್‍ಗಳು, ಗಂಗೋತ್ರಿ ಬಡಾವಣೆ ಹಾಗೂ ಫುಡ್ ಸ್ಟ್ರೀಟ್‍ಗೆ ತೆರಳಿ ಕೋವಿಡ್ ಮಾರ್ಗಸೂಚಿಯನ್ನು ಪರಿಶೀಲಿಸಿದರು. ಪಾಲನೆ ಮಾಡದವರಿಗೆ ಸ್ಥಳದಲ್ಲಿಯೇ ದಂಡ ವಿಧಿಸಲಾಯಿತು. ಕೆಲವರಿಗೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್ ಕುರಿತು ಅರಿವು ಮೂಡಿಸಿ, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.

      ಸರ್ಕಾರವು ಚಿತ್ರಮಂದಿರಗಳಿಗೆ ಶೇ.50ರಷ್ಟು ಸೀಟುಗಳಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ನಗರದ ಗಾಯಿತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಿ ಮಾಸ್ಕ್ ಧರಿಸಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರಾ ಎಂದು ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚನೆ ಅನ್ವಯ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿ ಎಲ್ಲಾ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ವಯಸ್ಸಾದವರು ಮನೆಯಲ್ಲಿರಬೇಕು. 70 ಕ್ಕೂ ಹೆಚ್ಚು ಜನರು ಇರುವ ಮಾಲ್‍ಗಳಿಗೆ ಭೇಟಿ ನೀಡಿ, ಕೋವೀಡ್ ಪರೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಮತ್ತು ಪಾಲಿಸದಿದ್ದರೆ ದಂಡ ವಿಧಿಸುವುದರ ಬಗ್ಗೆ ತಿಳಿಸಲಾಗಿದೆ ಎಂದರು.

       ಈಗಾಗಲೇ ನೈಟ್ ಕಫ್ರ್ಯೂ ವಿಧಿಸಲಾಗಿದ್ದು, ಸರ್ಕಾರದ ಆದೇಶ ಬರುವವರೆಗೂ ಮುಂದುವರಿಯಲಿದೆ.
ಈಗಾಗಲೇ ಜಿಲ್ಲೆಗೆ ಕೋವಿಡ್ ಸಂಬಂಧ ಬೇಕಾಗಿರುವ ಎಲ್ಲಾ ಔಷಧಿಗಳನ್ನು ದಾಸ್ತಾನು ಮಾಡಲು ಸರ್ಕಾರದ ಸಮನ್ವಯ ಸಾಧಿಸಲಾಗಿದೆ. ಸಾರ್ವಜನಿಕರು ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆಗೊಳಪಡಬೇಕು. ಜಿಲ್ಲೆಯಲ್ಲಿ 2 ಮೆಡಿಕಲ್ ಕಾಲೇಜುಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿರಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

       ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಮಾತನಾಡಿ, ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಅಧಿಕಾರಿಗಳು ಭಾಗವಹಿಸಿದ್ದರು.

(Visited 14 times, 1 visits today)
FacebookTwitterInstagramFacebook MessengerEmailSMSTelegramWhatsapp