ತುಮಕೂರು:

      ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಅವರು ಜಿಲ್ಲಾಸ್ಪತ್ರೆ ಹಾಗೂ ಶ್ರೀ ದೇವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನ, ಆರೈಕೆ ಸೇರಿ ದಂತೆ ಔಷಧೋಪಚಾರದ ಬಗ್ಗೆ ಪರಿಶೀಲನೆ ನಡೆಸಿದರು.

       ಸೋಂಕಿತರಿಗೆ ಯಾವ್ಯಾವ ಆಸ್ಪತ್ರೆಗಳಲ್ಲಿ ಎμÉ್ಟಷ್ಟು ಪ್ರಮಾಣದಲ್ಲಿ ಹಾಸಿಗೆ ನೀಡಲಾಗಿದೆ? ಸೋಂಕಿತರ ಪ್ರಮಾಣ ಎಷ್ಟಿದೆ? ಸಮಸ್ಯೆಯಿಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆಯಾ? ಎಂಬ ಬಗ್ಗೆಯೂ ಮಾಹಿತಿ ಪಡೆದರು.

      ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿ ವಾರ್ ರೂಂ ಗೆ ತಲುಪಬೇಕು. ಇದರಿಂದ ಹಾಸಿಗೆ ಅವಶ್ಯಕತೆ ಇರುವವರಿಗೆ ತಕ್ಷಣ ಹಾಸಿಗೆ ವ್ಯವಸ್ಥೆ ಮಾಡಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆ ಯಾಗಬಾರದು. ನಿಗಧಿಯಂತೆಯೇ ಪರೀಕ್ಷೆಗಳು ಸಕಾಲಕ್ಕೆ ನಡೆಯಬೇಕು. ವರದಿ ಸಮಯಕ್ಕೆ ಸರಿಯಾಗಿ ತಲುಪಬೇಕು. ಹಾಸಿಗೆ ಗಳ ಸಮಸ್ಯೆ, ಔಷಧ ಸಮಸ್ಯೆ ಉಂಟಾಗದಂತೆ ನಿಭಾಯಿಸಬೇಕು ಎಂದು ನಿರ್ದೇಶಿಸಿದರು.

        ಸೋಂಕಿತರಿಗೆ ಹಾಸಿಗೆಗಳನ್ನು ಒದಗಿಸುವ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಒಂದೇ ರೀತಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿ ದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಕ್ಕನುಗುಣವಾಗಿ ಆಮ್ಲಜನಕ ಸಾಂದ್ರಕ ಗಳನ್ನು ನೀಡುವ ಕುರಿತು ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ಅಡಿಪಾಯಕ್ಕೆ ಚಾಲನೆ ನೀಡಿದರು.

     ನಂತರ ನಗರದ ಚಿಕ್ಕ ಪೇಟೆಯಲ್ಲಿ ಸಾರ್ವ ಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾರಂಭಿಸಿರುವ ಟಿಎಂಸಿ ಬ್ಯಾಂಕ್‍ನ ಸಂಚಾರಿ ಎ.ಟಿಎಂ.ಗೆ ಚಾಲನೆ ನೀಡಿದರು.

(Visited 6 times, 1 visits today)