ತುಮಕೂರು:

      ಕರ್ನಾಟಕ ಸರ್ಕಾರ ಕೋವಿಡ್-19 2ನೇ ಅಲೆಯ ಲಾಕ್‍ಡೌನ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸ್ಲಂ ನಿವಾಸಿಗಳು ನಗರದ ಭಾರತಿ ನಗರದಲ್ಲಿ ಮನೆ ಮುಂದೆ ಪ್ರತಿಭಟನೆ ಮಾಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸ್ಥಳೀಯ ಮುಖಂಡ ಕೆಂಪಣ್ಣ ಮಾತನಾಡಿ ಸರ್ಕಾರ ಲಾಕ್‍ಡೌನ್ ಮಾಡಿದೆ. ಆದರೆ ಯಾವುದೇ ಪರಿಹಾರ ಕೊಡದೆ ಸ್ಲಂಗಳಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಕೇಸ್‍ಗಳು ದಾಖಲಾಗುತ್ತಿದ್ದು, ಸ್ಥಳೀಯ ಆರೋಗ್ಯ ಇಲಾಖೆಯಿಂದ ಕೊರೊನಾ ಬಂದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಕರೆದೊಯ್ಯಬೇಕು, ಇಲ್ಲಿ ಅತೀ ಹೆಚ್ಚಾಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವವರೆ ಹೆಚ್ಚಾನಿದ್ದು ಸರ್ಕಾರ 18 ವರ್ಷದಿಂದ 45 ವರ್ಷದೊಳಗಿನ ಎಲ್ಲರಿಗೂ ಆನ್‍ಲೈನ್ ರಿಜಿಸ್ಟರ್ ಮಾಡಿಕೊಂಡು ಉಚಿತ ಲಸಿಕೆ ಪಡೆಯುವಂತೆ ತಿಳಿಸಿದೆ. ಆದರೆ ಸ್ಲಂಗಳಲ್ಲಿ ಹೆಚ್ಚು ಅನಕ್ಷರಸ್ಥರು ಇದ್ದು ವ್ಯಾಕ್ಸಿನೇಷನ್ ಪಡೆಯಲು ತೊಂದರೆಯಾಗುತ್ತಿದೆ. ಆದ್ದ ರಿಂದ ಸ್ಥಳೀಯ ಆರೋಗ್ಯ ಅಧಿಕಾರಿಗಳು ಇಲಾಖೆಯ ಸಿಬ್ಬಂಧಿಗಳನ್ನು ಸ್ಲಂಗಳಿಗೆ ಕಳಿಸಿ ವ್ಯಾಕ್ಸಿನ್ ಹಾಕಿಸಲು ಕ್ರಮ ಕೈಗೊಳ್ಳಬೇಕು. ಎಂದರು.

      ನಂತರ ಮುನ್ನಿ ಎಂಬ ಯುವತಿ ಮಾತನಾಡಿ ಸರ್ಕಾರ 1250 ಕೋಟಿ ಪರಿಹಾರವಾಗಿ ಘೋಷಿಸಿದೆ. ಆದರೆ ನೊಂದಣಿ ಮಾಡಿದವರಿಗಷ್ಟೆ ಹಣ ಪಾವತಿಸುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.
ಜಿಲ್ಲಾ ಕೊಳಗೇರಿ ಸಮಿತಿಯ ಕಾರ್ಯದರ್ಶಿ ಅರುಣ್ ಸರ್ಕಾರಕ್ಕೆ 5 ಆಗ್ರಹಗಳನ್ನು ಒತ್ತಾಯಿಸಿದರು.

      ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಮತ್ತು ಸ್ಲಂ ನಿವಾಸಿಗಳಿಗೆ ಲಾಕ್‍ಡೌನ್ ಆರ್ಥಿಕ ಪರಿಹಾರವಾಗಿ ಮೂರು ತಿಂಗಳು ತಲಾ 10 ಸಾವಿರ ಭತ್ಯೆ ಘೋಷಿಸಬೇಕು. ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯಾ ವಿಪತ್ತು ಪರಿಹಾರದ ಮಾನದಂಡದಂತೆ ಮೂರು ತಿಂಗಳು ತಲಾ 10 ಕೆಜಿಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು. ರಾಜ್ಯದ ಎಲ್ಲಾ ನಾಗರೀಕರಿಗೂ ಉಚಿತ ಲಸಿಕೆ ನೀಡಬೇಕು ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು. ಕೋವಿಡ್ ಚಿಕಿತ್ಸೆ ಉಚಿತಗೊಳಿಸಿ ಅದರ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೋವಿಡ್ ನಿಂದ ಸಾವಿಗೀಡಾದ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಪಕ್ಕದ ರಾಜ್ಯಗಳು ಪ್ರತಿ ಕುಟುಂಬಗಳಿಗೆ 10 ಲಕ್ಷ ಪರಿಹಾರ ಘೋಷಿಸಿವೆ. ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲವೆಂದು ಸರ್ಕಾರಕ್ಕೆ ಆಗ್ರಹಿಸಿದರು.

(Visited 12 times, 1 visits today)