ತುಮಕೂರು :
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಇಂದು ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ, ಚಂದ್ರಗಿರಿ, ಸಿದ್ದಾಪುರ, ಮಿಡಿಗೇಶಿ , ಐ.ಡಿ. ಹಳ್ಳಿ ಗ್ರಾಮ ಪಂಚಾಯತ್‍ಗಳ ಗ್ರಾಮಗಳಲ್ಲಿ ಕೋವಿಡ್ 19 ಪ್ರಕರಣಗಳು ಧೃಡಪಟ್ಟ ಸೋಂಕಿತರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಸಾರ್ವಜನಿಕರಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.
ಈ ಪಂಚಾಯತಿ ವ್ಯಾಪ್ತಿಗಳಲ್ಲಿ ಕೋವಿಡ್-19 ಧನಾತ್ಮಕ ಪ್ರಕರಣಗಳು ಇಳಿಮುಖ ವಾಗುತ್ತಿರುವುದರಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಮುಕ್ತ ಗ್ರಾ.ಪಂ ಆಗಿ ಮಾಡಲು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
ಚಂದ್ರಗಿರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಕೋವಿಡ್-19 ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಮಿತಿಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವುದರ ಮೂಲಕ ಕೋವಿಡ್ 19 ಸಂಪೂರ್ಣವಾಗಿ ನಿಯಂತ್ರಣ ಮಾಡುವಂತೆ ಮನವಿ ಮಾಡಿದರು.
ನಂತರ ಬಡವನಹಳ್ಳಿಯಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಕೂಡಲೇ ಸದರಿ ಕೇರ್ ಸೆಂಟರ್ ನ್ನು ಪ್ರಾರಂಭಿಸಲು ಸೂಚಿಸಿದರು. ನಂತರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸ್ವ್ಯಾಬ್ ಸಂಗ್ರಹಣೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿದರು.