ತುಮಕೂರು:
ಕೊರೋನಾ ಲಾಕ್‍ಡೌನ್, ಕಫ್ರ್ಯೂ ಸಂದರ್ಭದಲ್ಲಿ ಬಹುತೇಕ ವಿವಾಹಗಳನ್ನು ಮನೆಯ ಹತ್ತಿರ ಮಾಡಲಾಗುತ್ತಿದೆ. ಕೆಲವರು ಈ ವೇಳೆ ಯಾರಿಗೂ ತಿಳಿಯದಂತೆ ಬಾಲ್ಯ ವಿವಾಹವನ್ನು ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಸುಖ ಜೀವನ ಹಾಳಾಗುತ್ತದೆ. ಆದ್ದರಿಂದ ಗಂಡಿಗೆ 21 ಹಾಗೂ ಹೆಣ್ಣಿಗೆ 18 ವರ್ಷ ತುಂಬುವವರೆಗೂ ವಿವಾಹ ಮಾಡಬಾರದು. ಬಾಲ್ಯವಿವಾಹದಿಂದ ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಅವರ ಜೀವನ ನರಕವಾಗುತ್ತದೆ ಎಂದು ತಿಳಿಸಿದ್ದಾರೆ. ಇದು ಮುಂದೆ ಹುಟ್ಟುವ ಮಕ್ಕಳ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ರೀತಿ ಕ್ರಮ ಕೈಗೊಳ್ಳಲಾಗಿದೆ.
ಪೋಷಕರು ಕೋವಿಡ್-19 ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ತಮ್ಮ ಮಕ್ಕಳಿಗೆ ಬಾಲ್ಯ ವಿವಾಹ ಮಾಡಲು ಮುಂದಾಗಬಾರದು. ಬಾಲ್ಯವಿವಾಹ ಮಾಡುವುದು ಅಪರಾಧ. ಅಪ್ರಾಪ್ತ ಹುಡುಗಿಯನ್ನು ಮದುವೆಯಾಗುವ ಹುಡುಗ, ಪೋಷಕರು ಹಾಗೂ ಪುರೋಹಿತರನ್ನು ಒಳಗೊಂಡಂತೆ ದೂರು ದಾಖಲಿಸಲಾಗುವುದು.ಬಾಲ್ಯವಿವಾಹ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಎರಡು ವರ್ಷ ಜೈಲುವಾಸ, 100000 ರೂ.ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಕೆ. ವಂಶಿಕೃಷ್ಣ ಎಚ್ಚರಿಕೆ ನೀಡಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಿಂದ ಈವರೆಗೆ ಜಿಲ್ಲೆಯಲ್ಲಿ 14 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜು ತಿಳಿಸಿದ್ದಾರೆ.