ತುಮಕೂರು:
ಸರ್ಕಾರದ ಮಾರ್ಗ ಸೂಚಿ ಯನ್ವಯ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಒuಛಿoಡಿ ಒಥಿಛಿosisಗೆ ಸಂಬಂಧಿಸಿದಂತೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು Mucor Mycosis ಚಿಕಿತ್ಸೆ ಸಂಬಂಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಇಎನ್‍ಟಿ ಹಾಗೂ Mucor Mycosis ಗೆ ಚಿಕಿತ್ಸೆ ನೀಡುವ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಾತನಾಡಿ, ಒuಛಿoಡಿ ಒಥಿಛಿosisಗೆ ಈಗಾಗಲೇ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಶಸ್ತ್ರಚಿಕಿತ್ಸೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಈಗಾಗಲೇ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ Mucor Mycosis ಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಚಿಕಿತ್ಸೆ ಯಶಸ್ವಿಯಾಗಿ ನಡೆಯುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರು ಅತ್ಯಂತ ಯಶಸ್ವಿಯಾಗಿ ಚಿಕಿತ್ಸೆಯನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು. ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ತಜ್ಞ ವೈದ್ಯರ ನೆರವು ಬೇಕು ಎಂದು ಖಾಸಗಿ ಹಾಗೂ ವೈದ್ಯಕೀಯ ಕಾಲೇಜುಗಳನ್ನು ಕೋರಿ ಕೊಂಡಾಗ ಮುಕ್ತ ಮನಸ್ಸಿನಿಂದ ಒಪ್ಪಿಕೊಂಡು ಸೇವೆಯನ್ನು ಮುಕ್ತವಾಗಿ ಉಚಿತವಾಗಿ ನೀಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.