ತುಮಕೂರು :
45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರವಿಕುಮಾರ್ ಬಂಧಿತ ಆರೋಪಿ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ಸುಲಿಗೆ ಮಾಡಲು ನಿಟ್ಟೂರು-ಸಂಪಿಗೆ ರಸ್ತೆಯ ಸಿಂಗಸಂದ್ರ ಗೇಟ್ ಬಳಿ ಶೆಡ್ ಬಳಿ ಮಡಿಕೆ ಕೊಳ್ಳಲು ಬಂದು, ಮಡಿಕೆ ಮಾರುವವರ ಕುತ್ತಿಗೆಗೆ ಲಾಂಗ್ ನಿಂದ ಹಲ್ಲೆ ನಡೆಸಿ ಅವರ ಬಳಿಯಿದ್ದ ಸುಮಾರು 45 ಗ್ರಾಂ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾನೆ.
ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ರವರು ಅಭಿನಂದಿಸಿದ್ದಾರೆ.
(Visited 39 times, 1 visits today)