ತುಮಕೂರು:
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುμÁ್ಠನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ- ಪಂಗಡದವರಿಗೆ ಆದ್ಯತೆ, ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆಯ ಸಮಗ್ರ ಅನುμÁ್ಠನಕ್ಕೆ ಆದ್ಯತೆ ಕೊಡಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಜಂಟಿಯಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ನರೇಗಾ ಯೋಜನೆ ಅನುμÁ್ಟನಕ್ಕೆ ತರಲಾಗಿದ್ದು, ಈ ಯೋಜನೆಯನ್ನು ಲೋಪದೋಷವಾಗದಂತೆ ಹಾಗೂ ಹಣ ದುರ್ಬಳಕೆಯಾಗದಂತೆ ಅನುμÁ್ಠನಗೊಳಿಸಬೇಕು. ಕೃಷಿ, ತೋಟಗಾ ರಿಕೆ ಸೇರಿದಂತೆ ನರೇಗಾ ಯೋಜನೆಯಡಿ ಅನುμÁ್ಟನಗೊಳಿಸಬಹುದಾದ ಎಲ್ಲವನ್ನೂ ಸಮಗ್ರವಾಗಿ ಅನುμÁ್ಟನಗೊಳಿಸಿ ಈ ಯೋಜನೆ ಯಶಸ್ವಿಯಾಗುವಂತೆ ಕ್ರಮ ವಹಿಸುವಂತೆ ನಿರ್ದೇಶಿಸಿದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಶಾಲಾ ಕಟ್ಟಡ, ಶಾಲಾ ಶೌಚಾಲಯಗಳನ್ನು ನಿರ್ಮಿಸಬೇಕು. ದುಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ದುರಸ್ಥಿಗೊಳಿಸಬೇಕು. ಜೊತೆಗೆ ಕೆರೆ-ಕಟ್ಟೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಅಂತರ್ಜಲ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು.
ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರಗೊಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಸಂಸದರ ನಿರ್ದೇಶನದಂತೆ ನರೇಗಾ ಯೋಜನೆಯಡಿ ಅನುμÁ್ಟನಕ್ಕಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮುಂದಿನ ಸಭೆ ವೇಳೆಗೆ ಈಗ ಸೂಚಿಸಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಮಳೆಗಾಲ ಪ್ರಾರಂಭಗೊಂಡಿರುವುದರಿಂದ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಶಾಲೆಗಳಲ್ಲಿ ಗಿಡಗಳನ್ನು ನೆಡಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಎಸ್ಪಿ ರಾಹುಲ್ ಕುಮಾರ್ ಶಹಾ ಪುರವಾಡ್, ಉಪವಿಭಾಗಾಧಿಕಾರಿ ಅಜಯ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.