ತುಮಕೂರು:
ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಅನಧಿಕೃತ ಪ್ರಾಣಿಹತ್ಯೆ, ಸಾಗಾಣಿಕೆ ತಡೆಗಟ್ಟುವ ಸಮತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅನಧಿಕೃತ ಪ್ರಾಣಿ ಹತ್ಯೆ ಹಾಗೂ ಸಾಗಾಣಿಕೆ ಬಗ್ಗೆ ದೂರು ಬಂದರೆ ತಕ್ಷಣವೇ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ನಿರ್ದೇಶಿಸಿದರು
ಜಾನುವಾರು ಖರೀದಿಸಿದ್ದರೆ ಅದಕ್ಕೆ ಮಾಲಿಕತ್ವದ ದಾಖಲೆ ಪಡೆದುಕೊಳ್ಳಬೇಕು. ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗೆ ಸಂಪೂರ್ಣ ಕಡಿವಾಣ ಹಾಕಬೇಕು. ಮಾಲೀಕತ್ವ ಹಾಗೂ ಇಯರ್ ಟ್ಯಾಗ್ ಸೇರಿದಂತೆ ಜಾನುವಾರು ‘ನನ್ನ ಮಾಲಿಕತ್ವ’ದ್ದು ಎನ್ನುವುದಕ್ಕೆ ಜಾನುವಾರು ಮಾಲೀಕರ ಬಳಿ ದಾಖಲೆ ಇಲ್ಲದಿದ್ದರೆ ಹತ್ತಿರದ ಗೋಶಾಲೆ ವಶಕ್ಕೆ ಜಾನುವಾರುಗಳನ್ನು ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಅನಧಿಕೃತ ಪ್ರಾಣಿಗಳ ಸಾಗಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಡಿ ಬಹುತೇಕ ವಾಹನಗಳು ಪದೇ ಪದೇ ಈ ಅನಧಿಕೃತ ಪ್ರಾಣಿ ಸಾಗಾಣೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ. ಆದ್ದರಿಂದ ಅಂತಹ ವಾಹನಗಳ ವಿವರವನ್ನು ಸಾರಿಗೆ ಇಲಾಖೆಗೆ ಒದಸಲಾಗುವುದು. ಮಾಹಿತಿ ನೀಡಿದ ವಾಹನಗಳನ್ನು ಸೀಜ್ ಮಾಡಿ ರಿಜಿಸ್ಟ್ರೇಷನ್ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚಿಸಿದರು.
ಸಭೆಯಲ್ಲಿ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ದಿವಾಕರ್ ಮಾತನಾಡಿ, ಅನಧಿಕೃತ ಪ್ರಾಣಿ ಹತ್ಯೆ ಹಾಗೂ ಸಾಗಾಟ ಮಾಡಿದರೆ ಕ್ರಮ ಕೈಗೊಳ್ಳಬಹುದಾದ ಮಾಹಿತಿ ಮತ್ತು ಜಿಲ್ಲೆಯಲ್ಲಿನ ಜಾನುವಾರುಗಳ ವಿವರ, ಇಯರ್ ಟ್ಯಾಗಿಂಗ್ ಅಳವಡಿಕೆ ಬಗ್ಗೆ ಸಭೆಗೆ ಮಾಹಿತಿ ಒದಗಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿμÁ್ಠಧಿಕಾರಿ ಉದೇಶ್, ಡಿವೈಎಸ್ ಪಿ ಶ್ರೀನಿವಾಸ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಸಾರಿಗೆ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.