ತುಮಕೂರು:

ತುಮಕೂರು ನಗರ ಠಾಣೆಯ ಪಿಎಸ್‍ಐ ಮಂಜುನಾಥ್ ಅಮಾನತ್ತಾಗಿರುತ್ತಾರೆ.
ನಗರದ ಸಬ್‍ಇನ್ಸ್‍ಪೆಕ್ಟರ್ ಮಂಜುನಾಥ್‍ರವರನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಆದೇಶವನ್ನು ಹೊರಡಿಸಿರುತ್ತಾರೆ.
ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರನ್ನು ಆಧರಿಸಿ ಪ್ರಾಥಮಿಕ ತನಿಖೆ ಕೈಗೊಂಡು ತನಿಖಾ ವರದಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್‍ರವರು ಅಮಾನತ್ತು ಮಾಡಿರುತ್ತಾರೆ.
ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಪಿಎಸ್‍ಐರವರನ್ನು ಅಮಾನತ್ತು ಮಾಡುವ ಮುಖೇನ ಕಾನೂನಿಗೆ ಯಾರೂ ದೊಡ್ಡವರಲ್ಲ, ಇಲಾಖೆಯೊಳಗಿನ ಅಧಿಕಾರಿಗಳು ಸಹ ಯಾವುದೇ ತಪ್ಪು ಮಾಡಬಾರದು, ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂಬ ಸ್ಪಷ್ಟ ಸಂದೇಶವನ್ನು ಈ ಆದೇಶದ ಮುಖಾಂತರ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇದೀಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಎಸ್ಪಿರವರ ಈ ಕಾರ್ಯ ಕ್ಷಮತೆಗೆ ಪ್ರಶಂಸನೀಯ ಮಾತುಗಳು ಕೇಳಿ ಬರುತ್ತವೆ.

(Visited 2 times, 1 visits today)