ತುಮಕೂರು:
ಬೆಂಗಳೂರು ಆರ್‍ಟಿಓ ಇನ್ಸ್‍ಪೆಕ್ಟರ್ ಕೃಷ್ಣಮೂರ್ತಿ ಅವರ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದೇವರ ಹಳ್ಳಿಯಲ್ಲಿರುವ ಫಾರಂ ಹೌಸ್ ಮೇಲೆ ಹತ್ತಕ್ಕೂ ಹೆಚ್ಚು ಮಂದಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಆಸ್ತಿ ಸಂಪಾದನೆಯ ಬಗ್ಗೆ ಪರಿಶೀಲನೆ ನಡೆಸಿದರು.
ಬೀದರ್, ತುಮಕೂರು, ದಾವಣಗೆರೆಯಲ್ಲಿ ಎಸಿಬಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದೆ. ದಾವಣಗೆರೆಯ ಯೋಜನಾ ನಿರ್ದೇಶಕ ಎಚ್.ಆರ್.ಕೃಷ್ಣಪ್ಪ ಹಾಗೂ ತುಮಕೂರಿನ ಆರ್‍ಟಿಓ ಇನ್ಸ್‍ಪೆಕ್ಟರ್ ಕೃಷ್ಣಮೂರ್ತಿ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ
(Visited 4 times, 1 visits today)