ತುಮಕೂರು :
ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ ಎಂದು ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ದೂರಿದರು.
ನಗರದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾವು ಕಾರಣರಲ್ಲ. ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆ ವಿಷಯದಲ್ಲಿ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರಿಗೆ ಸೋಲು ಉಂಟಾಯಿತು ಎಂದು ಹೇಳಿದರು.
ಕಳೆದ 3 ತಿಂಗಳಿನಿಂದ ಹಾಗೂ ನಿರಂತರ ಸೋಲಿನ ನಂತರ ಜನರೊಂದಿಗೆ ಬೆರೆತು ಹಾಗೂ ಮತದಾರರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ಹೀಗಾಗಿ ಈ ಬಾರಿ ನಾನು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ರಾಜೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
(Visited 75 times, 1 visits today)