ತುಮಕೂರು : 

      ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಎದ್ದಿದೆ ಈ ಮೂಲಕ ಮುಂದಿನ ದಿನದಲ್ಲಿ ದೇಶ ಹಾಗೂ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ನಾಗಮಂಗಲದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.

      ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣ ರವರ ಮನೆಗೆ ಭೇಟಿ ನೀಡಿದ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

      ಬೆಲೆ ಏರಿಕೆ ,ರೈತರ ವಿರೋಧಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ ಸಮಯದಲ್ಲಿ ಮೃತಪಟ್ಟ ರೈತರು ಹಾಗೂ ಇತ್ತೀಚಿಗೆ ನಡೆದ ವಿವಿಧ ಉಪಚುನಾವಣೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಜನತೆ ತಿರಸ್ಕರಿಸಿರುವುದು ಇದಕ್ಕೆ ಸಾಕ್ಷಿ ಎಂದರು.

      ಇನ್ನು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಕೊಂಚ ಪ್ರಬಲವಾಗಿರುವುದರಿಂದ ತುಮಕೂರಿನಲ್ಲಿ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಚುನಾವಣೆಗೆ ಕೆಏಎಸ್ ಅಧಿಕಾರಿಯೊಬ್ಬರನ್ನು ಸ್ವಯಂನಿವೃತ್ತಿ ನೀಡುವಂತೆ ಮಾಡಿ ಚುನಾವಣೆಗೆ ನಿಲ್ಲಿಸಿದ್ದಾರೆ.

 

(Visited 51 times, 1 visits today)