ಜಿಲ್ಲೆಯಲ್ಲಿ ಮೂರು ಮಂದಿ ಸಿಬ್ಬಂದಿಗಳಿಗೆ ಮಾರ್ಚ್ 14ರ ಸೋಮವಾರ ಬೆಂಗಳೂರಿನಲ್ಲಿ 2021-22ನೇ ಸಾಲಿನ ನರೇಗಾ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸಮ್ಮುಖದಲ್ಲಿ ನಡೆದ ನರೇಗಾ ಹಬ್ಬ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮೂರು ಮಂದಿ ಸಿಬ್ಬಂದಿಗಳಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗ್ರಾಮೀಣಾಭಿವೃದ್ಧಿ ಆಯುಕ್ತೆ ಶಿಲ್ಪಾ ನಾಗ್ ಸೇರಿದಂತೆ ರಾಜ್ಯ ಮಟ್ಟದ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿರುತ್ತಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಉತ್ತಮವಾಗಿ ಅನುμÁ್ಟನಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದು ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಕೊರಟಗೆರೆ ತಾಲ್ಲೂಕು ಮಾಹಿತಿ ಶಿಕ್ಷಣ ಸಂವಹನ(ಐಇಸಿ) ಸಂಯೋಜಕ ಟಿ.ಕೆ.ವಿನುತ್, ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುಸೂಧನ್ ಮೂರ್ತಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ನವೀನ್ ಕುಮಾರ್ ಸೇರಿದಂತೆ ಒಟ್ಟು ಮೂರು ಮಂದಿಗೆ ಈ ಬಾರಿ ನರೇಗಾ ಪ್ರಶಸ್ತಿಗಳು ಲಭಿಸಿದೆ. ತುಮಕೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ 3 ಪ್ರಶಸ್ತಿಗಳು ಲಭಿಸಿರುವುದು ಸಂತಸದ ಸಂಗತಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಜನರಿಗೆ ತಲುಪಿಸುವಂತೆ ಮಾಡುವುದು ಎಲ್ಲ ಅಧಿಕಾರಿ, ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಈ ಸಾಲಿನಲ್ಲಿ ದೊರೆತಿರುವ ಪ್ರಶಸ್ತಿಗಳು ಇತರೆ ಸಿಬ್ಬಂದಿಗಳಿಗೂ ಪ್ರೇರಣೆಯಾಗಬೇಕು. ಎಲ್ಲ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವಂತೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಈ ಬಾರಿಗಿಂತ ಹೆಚ್ಚಿನ ಪ್ರಶಸ್ತಿಗಳು ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಗೆ ದೊರಕುವಂತೆ ಎಲ್ಲರೂ ಶ್ರಮವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.