ತುಮಕೂರು :
ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ನೈರ್ಮಲ್ಯ ವಸ್ತು ವಿಷಯಗಳಿಗೆ ಸಂಬಂಧಿಸಿದ ಮೂಲ ಉದ್ದೇಶ ಹಾಗೂ ಕ್ರಿಯಾಶೀಲ ಮಾಹಿತಿಯುಳ್ಳ ಜಾಗೃತಿ ಪರಿಕರಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.ವಿದ್ಯಾಕುಮಾರಿ ಜಿಲ್ಲಾ ಅವರು ಪಂಚಾಯತಿ ಸಭಾಂಗಣದಲ್ಲಿಂದು ಬಿಡುಗಡೆ ಮಾಡಿದರು.
ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮುದ್ರಿತವಾಗಿರುವ 2022ರ ಕ್ಯಾಲೆಂಡರ್, ದಿನಚರಿ, ಕರಪತ್ರ, ಭಿತ್ತಿಚಿತ್ರ ಹಾಗೂ ಫ್ಲಿಪ್‍ಚಾರ್ಟ್ ಸೇರಿದಂತೆ ಜಾಗೃತಿ ಪರಿಕರಗಳನ್ನು ಬಿಡುಗಡೆ ಮಾಡಲಾಯಿತು.
ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಾಗೂ ಜಲ ಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದ ಈ ಜಾಗೃತಿ ಪರಿಕರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸುವ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲೆಗೆ ಸರಬರಾಜು ಮಾಡಲಾಗಿದೆ.
ಈ ಸಂದರ್ಭದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸಣ್ಣಮಸಿಯಪ್ಪ, ಉಪಕಾರ್ಯದರ್ಶಿ (ಅಭಿವೃದ್ಧಿ) ಅಥೀಕ್ ಪಾಷಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.