ತುಮಕೂರು:
ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಏಪ್ರಿಲ್ 16ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗಧಿಪಡಿಸಿದ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಡೀಸಿ ಸೂಚನೆ:-
ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು ನಿಗಧಿಪಡಿಸಿರುವ ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಂಡು ಕೈಗೊಂಡ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಗೆ ವರದಿ ಸಲ್ಲಿಸಬೇಕು. ಉಪವಿಭಾಗಾಧಿಕಾರಿಗಳು ಆಯಾ ಉಪವಿಭಾಗದ ಒಂದು ತಾಲ್ಲೂಕಿನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಸೂಚಿಸಿದ್ದಾರೆ.
ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿಯಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಭಾಗಹಿಸಲಿದ್ದು, ಉಳಿದಂತೆ ತುಮಕೂರು ತಾಲ್ಲೂಕು ಕಸಬಾ ಉತ್ತರ ಹೋಬಳಿ ಸತ್ಯಮಂಗಲ ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಎಸ್.ಕೊಡಿಗೆಹಳ್ಳಿ, ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿ ಸೀನಪ್ಪನಹಳ್ಳಿ, ತಿಪಟೂರು ತಾಲ್ಲೂಕು ಕಸಬಾ ಹೋಬಳಿ ಹೊನ್ನೇನಹಳ್ಳಿ, ತುರುವೇಕೆರೆ ತಾಲ್ಲೂಕು ಕಸಬಾ ಹೋಬಳಿ ಪುಟ್ಟಮಾದಿನಹಳ್ಳಿ, ಚಿ.ನಾ.ಹಳ್ಳಿ ತಾಲ್ಲೂಕು ಕಸಬಾ ಹೋಬಳಿ ಮುದ್ದೇನಹಳ್ಳಿ, ಮಧುಗಿರಿ ತಾಲ್ಲೂಕು ಪುರವರ ಹೋಬಳಿ ಹರಳಪುರ, ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ತಾಳಗುಂದ, ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿ ಹನುಮನಬೆಟ್ಟ ಗ್ರಾಮದಲ್ಲಿ ನಡೆಯಲಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನ ಕಾರ್ಯಕ್ರಮದಲ್ಲಿ ಸಂಬಂಧಿಸಿದ ತಹಶೀಲ್ದಾರರು ಭಾಗವಹಿಸಲಿದ್ದಾರೆ.
(Visited 2 times, 1 visits today)