ತುಮಕೂರು:
ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಅಭಿವೃದ್ಧಿಯಿಂದ ಕೈಗಾರಿಕಾ ಅವಶ್ಯಕತೆಗಳನ್ನು ಪೂರೈಸಲು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ಕ್ಷೇತ್ರ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸೂಕ್ತವಾದ ವೇದಿಕೆಯಾಗಿದೆ. ತಾಂತ್ರಿಕ ಶಿಕ್ಷಣದ ಗುಣಮಟ್ಟ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರಿಸುತ್ತಾ, ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಕ್ಷೇತ್ರದಲ್ಲಿ ಸಾಕಷ್ಟು ಬೇಡಿಕೆಯಾಗಿದೆ. ಹೆಚ್ಚು ಹೆಚ್ಚು ಅಭಿವೃದ್ಧಿ ಹೊಂದಲು ಎಲೆಕ್ಟ್ರಾನಿಕ್ಸ್ ತಂತ್ರಜ್ಞಾನವನ್ನು ಹೊಂದಿರುವುದಲ್ಲಿ ಅತ್ಯುತ್ತಮವಾಗಿದೆ. ವಿದ್ಯಾರ್ಥಿಗಳು ಕೋರ್ಸ್ ಪಡೆದ ನಂತರ ದೇಶ-ವಿದೇಶಗಳಲ್ಲಿ ಸಾಕಷ್ಟು ಉದ್ಯೋಗಾವಕಾಶವನ್ನು ಹೊಂದುತ್ತಿದ್ದಾರೆ ಎಂದು ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್.ಪಾಟೀಲ್‍ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಉದ್ಘಾಟನಾ ಸಮಾರಂಭ ಇನ್ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯೂನಿಕೇಷನ್ ಎಂಜಿನೀರ್ಸ್ ಸ್ಯೂಡೆಂಟ್ಸ್ ಫೋರಮ್ (ಐ.ಎಫ್.ಎಸ್) ವಿದ್ಯಾರ್ಥಿಗಳ ವೇದಿಕೆಯ ಐ.ಇ.ಟಿ.ಇ. ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶೇಷ ಉಪನ್ಯಾಸವನ್ನು ಏ.18 ರಂದು ಮೈಕ್ಯಾನಿಕಲ್ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರೊ.ಸಿ.ಮುರುಳಿರವರು 5ಜಿ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಐ.ಇ.ಟಿ.ಇ. ಕೇಂದ್ರದ ಉಪಾಧ್ಯಕ್ಷರಾದ ಡಾ.ಸಿ.ವಿ. ರವಿಶಂಕರ್‍ರವರು ಮಾತನಾಡುತ್ತಾ ವಿದ್ಯಾರ್ಥಿಗಳು ತಾಂತ್ರಿಕ ಗುಣಮಟ್ಟವನ್ನು ಸುಧಾರಿಸುವ ಮೂಲಕ ವಿದ್ಯಾರ್ಥಿಗಳ ವೃತ್ತಿಪರ ಅಭಿವೃದ್ಧಿಯನ್ನು ಸುಧಾರಿಸಲು ಐ.ಇ.ಟಿ.ಇ. ವೇದಿಕೆಯೂ ಅಗತ್ಯವಾಗಿದೆ. ಹೆಚ್ಚಿನ ಅಂಕಗಳಿಸುವುದರ ಜೊತೆಗೆ ಉದ್ಯೋಗ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು. ಕಾರ್ಯಾಗಾರಕ್ಕೆ ಶ್ರೀದೇವಿ ಛಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ ಹಾಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಚಾರಿಟಬಲ್ ಟ್ರಸ್ಟ್‍ನ ಅಂಬಿಕಾರವರು ಕಾರ್ಯಾಗಾರಕ್ಕೆ ಶುಭಹಾರೈಸಿದರು.
ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್‍ರವರು ಮಾತನಾಡುತ್ತಾ ಇಂಜಿನಿಯರಿಂಗ್ ಎಂಬುದೇ ಮಾನವನ ಅಭ್ಯುದಯಕ್ಕೆ ಸೃಷ್ಟಿಯಾದ ವಿದ್ಯೆಯಾಗಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳ ಕಡೆಗೆ ಗಮನ ನೀಡಿ ಜೀವನದ ಉನ್ನತಿಗೆ ಮಾರ್ಗ ಕಂಡುಕೊಳ್ಳಬೇಕೆಂದು ನುಡಿದರು.
ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರೊ. ಇಜಾಜ್ ಅಹಮದ್ ಷರೀಫ್‍ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ದೊರಕುತ್ತಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಐ.ಎಸ್.ಎಫ್. ಸಂಯೋಜಕರಾದ ಡಾ.ಪ್ರದೀಪ್.ಕೆ.ಜಿ.ಎಂ.ರವರು ಮಾತನಾಡುತ್ತಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಯಶಸ್ವಿಗೊಳಿಸಲು ಸಹಕರಿಸಿದ್ದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
(Visited 8 times, 1 visits today)