ಕೊರಟಗೆರೆ ;
ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ತೆರವಾಗಿದ್ದ ಕಾರಣ ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸದಸ್ಯರು ತಹಶೀಲ್ದಾರ್ ನಹಿದಾ ಜಮ್ ಜಮ್ ರವರ ಸಮಕ್ಷಮದಲ್ಲಿ ಆಯ್ಕೆ ಮಾಡಿದರು.
ತಾಲ್ಲೂಕು ದಂಡಾಧಿಕಾರಿಯಾದ ನಹಿದಾ ಜಮ್ ಜಮ್ ಮಾತನಾಡಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಚುನಾವಣೆ ಇಲ್ಲದೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯ ಕುಮಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಂಗನಾಥ್ ಬಿ ಎನ್ ರವರನ್ನು ಸದಸ್ಯರೆಲ್ಲರೂ ಸೇರಿ ಆಯ್ಕೆ ಮಾಡಿದ್ದಾರೆ.
ಇನ್ನು ಮುಂದೆ ಅಧ್ಯಕ್ಷರಾಗಿ ಶ್ರೀಮತಿ ವಿಜಯ ಕುಮಾರಿ ಉಪಾಧ್ಯಕ್ಷರಾಗಿ ರಂಗನಾಥ್ ರವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ನೂತನ ಅಧ್ಯಕ್ಷೆ ಶ್ರೀಮತಿ ವಿಜಯಕುಮಾರಿ ಮಾತನಾಡಿ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿರುವ ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೆಯೇ ನನ್ನ ಅಧ್ಯಕ್ಷ ಸ್ಥಾನದಲ್ಲಿ ನಾನು ಇರುವವರೆಗೂ ಪ್ರಾಮಾಣಿಕವಾಗಿ ಜನರ ಕುಂದು ಕೊರತೆಗಳನ್ನು ನಾನು ಜನರ ಬಳಿ ಹೋಗಿ ಬಗೆಹರಿಸುತ್ತೇನೆ ನನಗೆ ಮತ ನೀಡಿ ಗೆಲ್ಲಿಸಿರುವ ಜನರ ಸೇವೆಗೆ ನಾನು ಸದಾ ಸಿದ್ಧಳಿರುತ್ತೇನೆ ಎಂದು ತಿಳಿಸಿದರು.
ನೂತನ ಉಪಾಧ್ಯಕ್ಷ ರಂಗನಾಥ್ ಮಾತನಾಡಿ ನನ್ನನ್ನು ಉಪಾಧ್ಯಕ್ಷನಾಗಿ ಆಯ್ಕೆ ಮಾಡಿರುವ ಎಲ್ಲಾ ಸದಸ್ಯರಿಗೂ ನನ್ನ ಧನ್ಯವಾದಗಳು ಹಾಗೆಯೇ ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಅಲ್ಲಿಗೆ ಅವಶ್ಯಕತೆ ಇರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ನಮ್ಮ ಕರ್ತವ್ಯ ಜನರಿಗೆ ಬೇಕಾಗಿರುವ ನೀರು ಚರಂಡಿ ವಿದ್ಯುತ್ ಸಿಸಿ ರಸ್ತೆ ಇನ್ನಿತರೆ ಸೌಲಭ್ಯಗಳನ್ನು ಒದಗಿಸುವಲ್ಲಿ ನಮ್ಮ ಗ್ರಾಮ ಪಂಚಾಯಿತಿಯ ಸದಸ್ಯರ ಜೊತೆ ಕೈಜೋಡಿಸಿ ಕೆಲಸಗಳನ್ನು ಮಾಡಲು ಪ್ರಾಮಾಣಿಕನಾಗಿರುತ್ತೇನೆ ಎಂದು ತಿಳಿಸಿದರು .
ಕಾಂಗ್ರೆಸ್ ಪಕ್ಷದ ಮುಖಂಡ ಸೋಮಶೇಖರ್ ಮಾತನಾಡಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ನಮ್ಮ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ ಜಿ ಪರಮೇಶ್ವರ್ ಅವರ ಆಶೀರ್ವಾದದೊಂದಿಗೆ ನಮ್ಮ ಶ್ರೀಮತಿ ವಿಜಯ ಕುಮಾರಿ ರವರನ್ನು ಪಂಚಾಯ್ತಿಯ ಸದಸ್ಯರೆಲ್ಲರೂ ಸೇರಿ ಅವಿರೋಧವಾಗಿ ಆಯ್ಕೆ ಆಯ್ಕೆ ಮಾಡಿರುವುದರಿಂದ ಎಲ್ಲಾ ಸದಸ್ಯರಿಗೂ ನನ್ನ ಕೃತಜ್ಞತೆಗಳು ಎಂದು ತಿಳಿಸಿದರು ಹಾಗೆ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭವಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಅಧಿಕಾರಿ ವರ್ಗ ,ಪೆÇಲೀಸ್ ಸಿಬ್ಬಂದಿ ಮತ್ತು ಗ್ರಾಮ ಪಂಚಾಯ್ತಿಯ ಕಾರ್ಯನಿರ್ವಹಣಾಧಿಕಾರಿ ಮೈಲಣ್ಣ ಸೇರಿದಂತೆ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.
(Visited 2 times, 1 visits today)