ತುಮಕೂರು:
ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ ಅರ್ಹರಿಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃಂಖಏ) ಕಾರ್ಡುಗಳನ್ನು ವಿತರಿಸಲು ತುರ್ತಾಗಿ ಕ್ರಮಕೈಗೊಳ್ಳಲು ಆಯಾ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ಪಾಲಿಕೆ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ 7 ಲಕ್ಷ ಂಃಂಖಏ ಕಾರ್ಡುಗಳನ್ನು ವಿತರಿಸಲಾಗಿದ್ದು, ತಾಲ್ಲೂಕುವಾರು ಗ್ರಾಮವಾರು ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು.
ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು, 12 ರಿಂದ 14 ಮತ್ತು 15-17 ವಯಸ್ಸಿನೊಳಗಿನ ಮಕ್ಕಳಿಗೆ ನೀಡುವ ಲಸಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದರಲ್ಲದೇ, ಮೇ 16ರಿಂದ ಶಾಲೆಗಳು ಪ್ರಾರಂಭವಾಗಿದ್ದು, ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ತಾಲ್ಲೂಕು ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ವ್ಯಾಕ್ಸಿನೇಷನ್ ಪ್ರಗತಿ ಸಾಧಿಸಲು ಸೂಚಿಸಿದರು.
ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸುವ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೇಂದ್ರಗಳಿಗೆ ನಿವೇಶನ ಬೇಕಾಗಿದ್ದು, ನಗರ ವ್ಯಾಪ್ತಿಯಲ್ಲಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಆಯುಕ್ತರು/ಪೌರಾಯುಕ್ತರು/ಮುಖ್ಯಾಧಿಕಾರಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಒಗಳಿಗೆ ನಿವೇಶನ ಗುರುತಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯ ಹಲವಾರು ಶಾಲೆಗಳಲ್ಲಿ ಸಣ್ಣ ಪ್ರಮಾಣದ ದುರಸ್ತಿ ಕಾರ್ಯ ಅಗತ್ಯವಾಗಿದ್ದು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಎಸ್‍ಡಿಎಂಸಿ ಸಭೆ ಕರೆದು ಕಟ್ಟಡ ನವೀಕರಣಕ್ಕೆ ಕ್ರಮವಹಿಸುವಂತೆ ಸೂಚಿಸಿದರು.
ಸಮಗ್ರ ಸಾರ್ವಜನಿಕ ಕುಂದು-ಕೊರತೆ ನಿವಾರಣ ವ್ಯವಸ್ಥೆಯಡಿ 53 ಅರ್ಜಿಗಳು ಬಾಕಿಯಿದ್ದು, ಕೂಡಲೇ ಇತ್ಯರ್ಥಗೊಳಿಸುವಂತೆ ಆಯಾ ತಹಸಿಲ್ದಾರರಿಗೆ ಸೂಚಿಸಿದರಲ್ಲದೇ, ಸಾಮಾಜಿಕ ಭದ್ರತಾ ಯೋಜನೆಯಡಿ 423 ಆಧಾರ್ ಸೀಡಿಂಗ್ ಪ್ರಕರಣಗಳು ಇದ್ದು, ಶೀಘ್ರವಾಗಿ ವಿಲೇವಾರಿ ಮಾಡುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ ಕೋವಿಡ್ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈವರೆಗೆ 1282 ಪ್ರಕರಣಗಳಿಗೆ ಪರಿಹಾರ ಪಾವತಿಸಲಾಗಿದೆ ಎಂದರಲ್ಲದೇ, Sಖಈ Iಆ ಇಲ್ಲದ 230 ಪ್ರಕರಣಗಳು ಬಾಕಿಯಿದೆ ಎಂದು ತಿಳಿಸಿದರು. ಭೂಮಿ ಯೋಜನೆ, ಪಹಣಿ ಕಾಲಂ 3/9 ಮಿಸ್‍ಮ್ಯಾಚ್ ವಿಲೇವಾರಿ, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, 11ಇ ಗೆ ಸಂಬಂಧಿಸಿದಂತೆ ಆರ್.ಟಿ.ಸಿ ತಿದ್ದುಪಡಿ ಪ್ರಕರಣ, ಕಂದಾಯ ಗ್ರಾಮಗಳ ರಚನೆ ಸಂಬಂಧ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ವಿ. ಅಜಯ್, ತಹಶೀಲ್ದಾರರಾದ ಜಿ.ವಿ ಮೋಹನ್ ಕುಮಾರ್, ಎಂ. ಮಮತಾ, ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಬಿ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಟಿ.ಎ ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್ ಆಂಜನಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
(Visited 1 times, 1 visits today)