ತುಮಕೂರು :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ರಾಶ್ರಯದಲ್ಲಿ ಇಂದು ನಡೆದ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಮತ್ತು ಮಾಸಾಚರಣೆ ಕುರಿತ ಜಾಥಾ ಕಾರ್ಯಕ್ರಮಕ್ಕೆ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು, ಜಾಥಾ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಬುದ್ದಿವಂತರು, ವಿಚಾರ ಮಾಡುವ ಶಕ್ತಿಯುಳ್ಳವರು, ಸಾಧಿಸುವಂತ ಛಲವುಳ್ಳರಾಗಿರಬೇಕು ಎಂದರಲ್ಲದೇ, ಮಕ್ಕಳ ಯಾವುದೇ ರೀತಿಯ ಸಹಾಯಕ್ಕಾಗಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಅಗತ್ಯ ರಕ್ಷಣೆ ಮತ್ತು ಪೋಷಣೆ ನೀಡಲಾಗುವುದು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಮಕ್ಕಳ ಮೇಲೆ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಮಕ್ಕಳು ಯಾವುದೇ ತೊಂದರೆಗೆ ಒಳಗಾದಾಗ ಮಕ್ಕಳ ಸಹಾಯವಾಣಿ ಸಂಖ್ಯೆ1098 ಕರೆ ಮಾಡಿದರೆ ಇಲಾಖಾಧಿಕಾರಿಗಳು ಭೇಟಿ ನೀಡಿ ಅಗತ್ಯ ರಕ್ಷಣೆ ನೀಡುತ್ತಾರೆಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ ತೊಂದರೆಯಲ್ಲಿರುವ ಯಾವುದೇ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬಹುದು ಎಂದರು.
(Visited 2 times, 1 visits today)