ತುಮಕೂರು:
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಕೈಗೊಳ್ಳುವ ಪರಿಶಿಷ್ಟ ಕಲ್ಯಾಣಾಭಿವೃದ್ದಿ ಕಾಮಗಾರಿಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ನಿಗಧಿತ ಅವಧಿಯಲ್ಲಿ ಅನುμÁ್ಠನ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಮ್ಮ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ ಉಪಯೋಜನೆ/ ಗಿರಿಜನ ಉಪಯೋಜನೆ 2013&2017ರ ಅನುμÁ್ಠನ ಕುರಿತ ಜಿಲ್ಲಾ ಮೇಲ್ವಿಚಾರಣ ಸಮಿತಿ ಸಭೆಗೆ ಮಾರ್ಚ್ 2022ರ ಮಾಹೆಯ ಅಂತ್ಯಕ್ಕೆ ವಿವಿಧ ಇಲಾಖೆಗಳ ಅನುμÁ್ಠನಾಧಿಕಾರಿಗಳು ಸಾಧಿಸಿರುವ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪರಿಶಿಷ್ಟರ ಕಲ್ಯಾಣಕ್ಕಾಗಿ ಸರ್ಕಾರವು ಹಲವು ಯೋಜನೆಗಳನ್ನು ಅನುμÁ್ಠನಕ್ಕೆ ತಂದಿದ್ದು ಅಧಿಕಾರಿಗಳು ಯಾವುದೇ ರೀತಿಯ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಯಡಿ ಸರ್ಕಾರವು ಸಾಕಷ್ಟು ಅನುದಾನವನ್ನು ಒದಗಿಸಿದ್ದು ಯಾವುದೇ ಕಾರಣಕ್ಕೂ ಪರಿಶಿಷ್ಟರ ಕಲ್ಯಾಣಕ್ಕೆ ಒದಗಿಸಿರುವ ಅನುದಾನ ವಾಪಸ್ಸಾಗಬಾರದು.ಶೀಘ್ರಗತಿಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಾ ಮಾತನಾಡಿ ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಗಳಡಿ ಕಾರ್ಯಕ್ರಮ ರೂಪಿಸಿ ಅನುμÁ್ಠನಗೊಳಿಸಿ ಸಾಧಿಸಲಾಗಿರುವ ಪ್ರಗತಿಯ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಬಿ ನಾಗೇಂದ್ರಪ್ಪ, ಜಿಲ್ಲಾ ಕಾರ್ಮಿಕಾಧಿಕಾರಿ ಡಾ.ರಮೇಶ್, ಕೌಶಲ್ಯ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘುನಂದನ್, ರೇμÉ್ಮ ಇಲಾಖೆ ಉಪನಿರ್ದೇಶಕ ವೈ.ಕೆ ಬಾಲಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.