ತುಮಕೂರು:


ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಇಂದು ತಿಪಟೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರುಗಳ ಸಂಯುಕ್ತಾಶ್ರಯದಲ್ಲಿಂದು ತಿಪಟೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ್ ಅವರು, ಪ್ರತಿಯೊಂದು ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಸಮರ್ಪಕವಾದ ಶುದ್ಧವಾದ ನೀರನ್ನು ಎಲ್ಲರಿಗೂ ಸಹ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿ ಗ್ರಾಮಗಳಲ್ಲೂ ಸರಿಯಾದಂತಹ ನೀರು ಸರಬರಾಜು ವ್ಯವಸ್ಥೆಯನ್ನು ಮಾಡುವಂತಹ ಕೆಲಸಗಳಲ್ಲಿ ಗ್ರಾಮಪಂಚಾಯಿತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರುಗಳು ಹೆಚ್ಚಿನ ಆಸಕ್ತಿ ವಹಿಸಿ, ಯೋಜನೆಯ ಲಾಭವನ್ನು ಎಲ್ಲ ಗ್ರಾಮಸ್ಥರುಗಳಿಗೆ ತಲುಪಿಸುವಂತೆ ಕ್ರಮವಹಿಸಬೇಕು. ಯೋಜನೆಯಲ್ಲಿ ಬರುವಂತಹ ಸಮುದಾಯ ವಂತಿಕೆ ಏಕೆ ಕಟ್ಟಬೇಕು ಎಂಬುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು.
ನೀರಿನ ಸಮರ್ಪಕ ಬಳಕೆಯ ಬಗ್ಗೆ ಜನರಲ್ಲಿ ಹೆಚ್ಚಿನ ಮನವರಿಕೆ ಮಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಕಂದಾಯ ಗ್ರಾಮಗಳಲ್ಲಿ ರಚನೆಯಾಗಿರುವ ಗ್ರಾಮ ನೈರ್ಮಲ್ಯ ಸಮಿತಿಗಳು ನೀರು ಮತ್ತು ನೈರ್ಮಲ್ಯ ವಿಚಾರದಲ್ಲಿ ಸಕ್ರಿಯವಾಗುವಂತೆ ನೋಡಿಕೊಳ್ಳಬೇಕು. ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ ನೀರಿನ ಕೊರತೆ ಆಗದಂತೆ ಇರುವಂತಹ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವಂತೆ ಜನರಲ್ಲಿ ಪ್ರೇರೇಪಿಸಬೇಕು ಎಂದು ಅವರು ತಿಳಿಸಿದರು.
ಈ ಯೋಜನೆಯು ಯಶಸ್ವಿಯಾಗಬೇಕೆಂದರೆ ಸಮುದಾಯದ ಸಹಭಾಗಿತ್ವ ಮುಖ್ಯ. ಆದ್ದರಿಂದ ಪ್ರತಿಯೊಬ್ಬ ನಾಗರೀಕನು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.
ಸಹಾಯಕ ಕಾರ್ಯಪಾಲಕ ಅಭಿಯಂತರಾದ ಚಂದ್ರಶೇಖರ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ತಿಪಟೂರು ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಜಲಜೀವನ ಮಿಷನ್ ಯೋಜನೆಯು ಅನುμÁ್ಠನಗೊಳ್ಳುತ್ತಿದೆ. ಯೋಜನೆ ಅನುμÁ್ಠನಗೊಳ್ಳುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಕಾರ ಪ್ರಮುಖವಾಗಿದ್ದು, ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯೋಜನೆಗಳ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿ ಯೋಜನೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಿ ನಾವು ನೀವು ಎಲ್ಲರೂ ಒಗ್ಗೂಡಿ ಎಲ್ಲಾ ಮನೆಗಳಿಗೂ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕ ಪ್ರತಿ ಕುಟುಂಬಕ್ಕೂ ಸಮರ್ಪಕ ಶುದ್ಧ ನೀರನ್ನು ಒದಗಿಸೋಣ ಎಂದು ತಿಳಿಸಿದರು. ಕಿರಿಯ ಅಭಿಯಂತರರಾದ ನಾರಾಯಣಮೂರ್ತಿ ಅವರು ತಾಂತ್ರಿಕ ವಿಷಯ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಉಮೇಶ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಕಾರ್ಯಕ್ರಮ ಅನುμÁ್ಠನ ಹಂತದಲ್ಲಿ ಗ್ರಾಮ ಪಂಚಾಯಿತಿ ಮತ್ತು ಚುನಾಯಿತ ಸದಸ್ಯರುಗಳ ಪಾತ್ರ ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರುಣ್‍ಕುಮಾರ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆ ಗುರಿ ಮತ್ತು ಉದ್ದೇಶಗಳ ಬಗ್ಗೆ ಕುರಿತು ಹಾಗೂ ಪ್ರಸ್ತುತ ಅನುμÁ್ಠನವಾಗುತ್ತಿರುವ ಗ್ರಾಮಗಳಲ್ಲಿ ಕಾಮಗಾರಿ ಗುಣಮಟ್ಟ ಪರಿಶೀಲನೆ ಮತ್ತು ಮೇಲ್ವಿಚಾರಣೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಎಲ್ಲಾ ಗ್ರಾ.ಪಂ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅನುμÁ್ಠನ ಬೆಂಬಲ ಸಂಸ್ಥೆಯ ಕಿರಣ್, ಗೋವರ್ಧನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 2 times, 1 visits today)