ತುಮಕೂರು


ಕೆಲವು ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರವರ್ತಿ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ದುಷ್ಕøತ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ.
ಈ ಸರಕಾರದಲ್ಲಿ ಯಾರು ಹೇಗೆ ಬೇಕಾದರೂ ವರ್ತಿಸಬಹುದೆಂಬುದನ್ನು ಮತ್ತು ಆಡಳಿತದ ಮೇಲೆ ಸರಕಾರದ ಯಾವುದೇ ನಿಯಂತ್ರಣವಿಲ್ಲವೆಂಬುದನ್ನು ಮತ್ತೊಮ್ಮೆ ಸ್ಪಷ್ಠ ಪಡಿಸುತ್ತದೆ.
ಯಾವುದೇ ಸೂಕ್ತ ವೇದಿಕೆಗಳಲ್ಲಿ ಚರ್ಚಿಸದೇ, ಸೂಕ್ತ ಆದೇಶ ಹೊರಡಿಸದೇ ತಮಗೆ ತಿಳಿದಂತೆ ಕಾರ್ಯ ನಿರ್ವಹಿಸುವುದು, ಇಲ್ಲವೇ ಮತ್ಯಾವುದೋ ಅವಿತಿಟ್ಟುಕೊಂಡ ದುಷ್ಠ ಶಕ್ತಿಯ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ಇದು ಮತ್ತೊಮ್ಮೆ ಎತ್ತಿ ತೋರಿಸುತ್ತದೆ.
ಈ ಅಧಿಕಾರ ದುರುಪಯೋಗದಿಂದ ಮತ್ತು ತಜ್ಞರಲ್ಲದವರ ದುರ್ನಡೆಯಿಂದ ನಾಡಿನ ಗಣ್ಯ ವ್ಯಕ್ತಿಗಳು ಅಪಮಾನಿತರಾಗುವಂತಾಯಿತು. ರಾಜ್ಯದ ದಶ ಲಕ್ಷಾಂತರ ಶಾಲಾ ಮಕ್ಕಳು ಪಠ್ಯ ಪುಸ್ತಕ ಲಭ್ಯವಿಲ್ಲದೇ ಶೈಕ್ಷಣಿಕವಾಗಿ ಈ ವರ್ಷವೂ ತೊಂದರೆಗೀಡಾಗುವಂತಾಯಿತು.
ಮಾತ್ರವಲ್ಲಾ, ರಾಜ್ಯದ ಬೊಕ್ಕಸದ ನೂರಾರು ಕೋಟಿ ರೂಗಳ ಮೊತ್ತ ದುರ್ವಿನಿಯೋಗವಾಗುವಂತಾಯಿತು.
ಸಚಿವ ನಾಗೇಶ್ ರವರ ಇಂತಹ ಜವಾಬ್ದಾರಿ ಹೀನ ಮತ್ತು ದೂರದೃಷ್ಠಿ ರಹಿತ ದುರ್ವರ್ತನೆಗಳಿಂದ ಕರ್ನಾಟಕದ ಭವಿಷತ್ತಿನ ಅಭಿವೃದ್ಧಿಯ ಮೇಲೆ ಖಂಡಿತಾ ದುಷ್ಪರಿಣಾಮ ಬೀರಲಿದೆ. ಇದೊಂದು, ನಾಗರೀಕ ಜಗತ್ತಿನ ಮುಂದೆ ಕರ್ನಾಟಕದ ಜನತೆ ಮತ್ತೊಮ್ಮೆ ನಾಚಿಕೆಯಿಂದ ತಲೆ ತಗ್ಗಿಸುವಂತಹ ಪ್ರಸಂಗವಾಗಿದೆ.
ಮುಖ್ಯಮಂತ್ರಿಗಳಿಗೆ ಸ್ವಲ್ಪವಾದರು ನಾಚಿಕೆ ಎಂಬುದೇನಾದರು ಇದ್ದರೇ ಶಿಕ್ಷಣ ಸಚಿವರು ಹಾಗೂ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯನ್ನು ಈ ಕೂಡಲೇ ವಜಾ ಮಾಡುವಂತೆ ಸಿಪಿಐಎಂ ಬಲವಾಗಿ ಆಗ್ರಹಿಸುತ್ತದೆ. ಕೋವಿಡ್ ಕಾರಣದಿಂದ ಈಗಾಗಲೇ ಕಳೆದೆರಡು ವರ್ಷಗಳಿಂದ ವಿದ್ಯಾರ್ಥಿ ಗಳು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸರಕಾರಕ್ಕೆ ಆಡಳಿತದ ಮೇಲೆ ಯಾವುದೇ ಹಿಡಿತವಿಲ್ಲದೇ ಇರುವುದರಿಂದ ಉಂಟಾದ ಈ ಅನಗತ್ಯ ಪ್ರಹಸನದಿಂದ ಈ ವರ್ಷವು ಮಕ್ಕಳು, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಹಳೆಯ ಪಠ್ಯಕ್ರಮವನ್ನೇ ಮುಂದು ವರೆಸುವಂತೆ ಮತ್ತು ರಾಜ್ಯದ ಬೊಕ್ಕಸಕ್ಕಾದ ನಷ್ಠವನ್ನು ಅಧಿಕಾರ ದುರುಪಯೋಗ ಮಾಡಿಕೊಂಡ ಸಚಿವ ನಾಗೇಶ್ ಮತ್ತು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ವಸೂಲಿ ಮಾಡುವಂತೆ ಸಿಪಿಐಎಂ ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತದೆ.

(Visited 2 times, 1 visits today)