ತುಮಕೂರು:


ಸರ್ಕಾರದ ಬಹು ನಿರೀಕ್ಷಿತ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವು ಜೂನ್ 18ರಂದು ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು.
ಆರೋಗ್ಯ ಇಲಾಖಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಬೇಕಲ್ಲದೆ ಶಿಬಿರದಲ್ಲಿ ಆಯುμÁ್ಮನ್ ಕಾರ್ಡು ವಿತರಣೆ ಹಾಗೂ ಕಣ್ಣಿನ ತಪಾಸಣೆ ನಡೆಸಿ ಕನ್ನಡಕಗಳನ್ನು ವಿತರಣೆ ಮಾಡಬೇಕು ಎಂದು ನಿರ್ದೇಶಿಸಿದರು. ಸಾರ್ವಜನಿಕರು ನೀಡುವ ಅಹವಾಲುಗಳನ್ನು ಸ್ವೀಕರಿಸುವ ಹಾಗೂ ಪರಿಹಾರ ಕಲ್ಪಿಸುವ ಸಂಬಂಧ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲು ಸಲ್ಲಿಸುವವರಿಗೆ ಹಿಂಬರಹ ನೀಡುವ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರನ್ನು ಸೇರಿಸಬೇಕು. ಸ್ಥಳೀಯ ಪಂಚಾಯತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದರೊಂದಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಸೂಚನೆ ನೀಡಿದರು. ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಿದರು.
ಸಭೆಯಲ್ಲಿ ಎಸ್ಪಿ ರಾಹುಲ್‍ಕುಮಾರ್ ಶಹಪೂರ್ ವಾಡ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಡಿಎಚ್‍ಓ ಡಾ.ಎಂ.ಬಿ. ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಸೇರಿದಂತೆ ಇನ್ನಿತರರು ಹಾಜರಿದ್ದರು.

(Visited 1 times, 1 visits today)