ತುಮಕೂರು:
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಪೂರಕವಾಗಿ ಕೈಗೊಂಡಿರುವ ಉಡಿeಥಿ ತಿಚಿಣeಡಿ ಒಚಿಟಿಚಿgemeಟಿಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯಲ್ಲಿ ಸೋಮವಾರ ಜರುಗಿದ ತುಮಕೂರು, ಗುಬ್ಬಿ, ಕೊರಟಗೆರೆ ಮತ್ತು ಕುಣಿಗಲ್ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಂಃಂಖಏ ಕಾರ್ಡ್ ವಿತರಣೆಗೆ ಕ್ರಮವಹಿಸಲು ಸೂಚಿಸಿದರು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಾರಕ್ಕೆ 500 ಕಾರ್ಡ್ ವಿತರಿಸಬೇಕು ಎಂದರಲ್ಲದೆ, ಒಉಓಖಇಉಂ ಸಾಮಾಜಿಕ ಪರಿಶೋಧನೆಯಲ್ಲಿ ವಸೂಲಾತಿಗೆ ಸೂಚಿಸಿರುವ ಕಂಡಿಕೆಗಳನ್ನು ತೀರುವಳಿ ಮಾಡಿಸಬೇಕು. ಒಉಓಖಇಉಂ ನಿಗಧಿತ ವೇಳೆಗೆ ಕೂಲಿ ಮೊತ್ತ ಪಾವತಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 100 ಕೈತೋಟ ಕಾಮಗಾರಿಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಅನುμÁ್ಠನ ಮಾಡಬೇಕು ಎಂದು ತಿಳಿಸಿದರು.
ಈಗಾಗಲೇ ಆಯ್ಕೆಯಾಗಿರುವ 2010-11 ರಿಂದ 2021-22 ರವರೆಗೆ ಮನೆಗಳನ್ನು ಅಕ್ಟೋಬರ್-2022ರೊಳಗೆ ಪೂರ್ಣಗೊಳಿಸಲು ತಿಳಿಸಿದರು. ಡಿಜಿಟಲ್ ಲೈಬ್ರರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಕಾಲ ಮತ್ತು IPಉಖS ಅರ್ಜಿಗಳನ್ನು ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಬೇಕು. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ 1ನೇ ಹಂತದ ಕಾಮಗಾರಿಗಳ ಮುಕ್ತಾಯ ವರದಿಯನ್ನು ಜೂನ್ 2022ರ ಅಂತ್ಯಕ್ಕೆ ಸಲ್ಲಿಸಲು ತಿಳಿಸಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನಗಳನ್ನು ಮಾಹೆಯಾನ 5ರೊಳಗೆ ಪಾವತಿಸಲು ತಿಳಿಸಿದರಲ್ಲದೆ, ಶೇ.25ರಷ್ಟು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಶೇ. 5ರಷ್ಟು ವಿಕಲಚೇತನರಿಗೆ ಸೌಲಭ್ಯ ನೀಡಬೇಕು. ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿಗೆ ರಕ್ಷಣಾ ಸಲಕರಣೆಗಳನ್ನು ನೀಡಲು ಹಾಗೂ ಅವರ ಆರೋಗ್ಯ ತಪಾಸಣೆಯನ್ನು ನಿಗಧಿತ ಅವಧಿಯಲ್ಲಿ ಮಾಡಿಸಲು ಕ್ರಮವಹಿಸಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯಿತಿಯ ತೆರಿಗೆಯನ್ನು ಆನ್‍ಲೈನ್ ಮುಖಾಂತರ ಪಾವತಿ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದ್ದು, ಅದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ, ಯೋಜನಾ ನಿರ್ದೇಶಕರು, ಮುಖ್ಯಯೋಜನಾಧಿಕಾರಿ, ತುಮಕೂರು, ಕೊರಟಗೆರೆ, ಕುಣಿಗಲ್, ಗುಬ್ಬಿ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.