ತುಮಕೂರು:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಗಸ್ಟ್ 13ರಂದು ರಾಷ್ಟ್ರೀಯ ಲೋಕ್ ಅದಾಲತ್ (ಜನತಾ ನ್ಯಾಯಾಲಯ) ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
“ಸರ್ವರಿಗೂ ನ್ಯಾಯ” ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ. ಯಾವೊಬ್ಬ ಪ್ರಜೆಯು ತನ್ನ ಅರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು, ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ವ್ಯವಸ್ಥೆಗೊಳಿಸಲು ಹಾಗೂ ಸಮಾನ ಅವಕಾಶಗಳ ಆಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯ ನಿರ್ವಹಿಸಿ ನ್ಯಾಂiÀi ಒದಗಿಸುವಂತೆ ಮಾಡುವ ಶ್ರೇಷ್ಠ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಆಗಸ್ಟ್ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಏರ್ಪಡಿಸಲಾಗಿದೆ.
ಈ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧs್ಯಕ್ಷರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿಯೂ ಆಗಸ್ಟ್ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗುವುದು.
ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ (U/s 138 ಓI ಂಛಿಣ) , ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳ ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ (ಇxಛಿಟuಜiಟಿg ಟಿoಟಿ -ಛಿomಠಿouಟಿಜಚಿbಟe) , ಇತರ (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಇತರೆ ಸಿವಿಲ್ ಪ್ರಕರಣಗಳು) ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಹುದಾದ ಅಪರಾಧಿಕ, ಚೆಕ್ಕು ಅಮಾನ್ಯ (U/s 138 ಓ.I ಂಛಿಣ), ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ವಿದ್ಯುತ್ ಹಾಗೂ ನೀರಿನ ಶುಲ್ಕ (ಓoಟಿ ಅomಠಿouಟಿಜಚಿbಟe ಹೊರತುಪಡಿಸಿ), ವೈವಾಹಿಕ / ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಹಾಗೂ ಪಿಂಚಣಿ, ಕಂದಾಯ (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು) ಪ್ರಕರಣಗಳನ್ನು ಈ ಅದಾಲತ್‍ನಲ್ಲಿ ಇತ್ಯರ್ಥಪಡಿಸಲಾಗುವುದು.
ಪ್ರಕರಣವನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿ ಕೊಳ್ಳಬಹುದಾಗಿದೆ. ಜನತಾ ನ್ಯಾಯಾಲಯದಲ್ಲಿ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು ಹಾಗೂ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು.
ಮಾನ್ಯ ಸರ್ವೋಚ್ಛ ನ್ಯಾಯಾಲಯವು ದಿನಾಂಕ 11.08.2020 ರಂದು ವಿನಿತಾ ಶರ್ಮ ಪ್ರಕರಣದಲ್ಲಿ ದಾಯಾದಿ ಆಸ್ತಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪನ್ನು ನೀಡಿದ್ದು ಸದರಿ ತೀರ್ಪಿನಲ್ಲಿ ಹಿಂದೂ ಅವಿ¨Àsಕ್ತ ಕುಟುಂಬದಲ್ಲಿ ದಾಯಾದಿಯ ಮಗಳು, ಒಬ್ಬ ಮಗನ ರೀತಿಯಲ್ಲಿಯೇ ಹುಟ್ಟಿನಿಂದಲೇ ದಾಯಾದಿ ಆಸ್ತಿಯಲ್ಲಿ ಹಕ್ಕು ಮತ್ತು ಹೊಣೆಗಾರಿಕೆಯನ್ನು ಹೊಂದುತ್ತಾಳೆ ಎಂದು ಆದೇಶವಾಗಿರುತ್ತದೆ. ಆದ್ದರಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ವಿಭಾಗ ದಾವೆಗಳ ಇತ್ಯರ್ಥಕ್ಕೆ ಇದೊಂದು ಸುವರ್ಣಾವಕಾಶವಾಗಿದೆ.
ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ನಡೆಯುತ್ತಲಿವೆ. ರಾಜೀ ಮಾತುಕತೆಯನ್ನು ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಅಂದರೆ ಆನ್‍ಲೈನ್/ ವಿಡಿಯೋ ಕಾನ್ಫರೆನ್ಸ್/ ಎಲೆಕ್ಟ್ರಾನಿಕ್ಸ್ ಮೋಡ್/ ವಾಟ್ಸ್‍ಆಪ್ ಮೂಲಕವೂ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್/ ಎಸ್.ಎಮ್.ಎಸ್/ ಖುದ್ದು ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.